ಇತ್ತೀಚಿನ ಸುದ್ದಿ
ರಾಜಕಾರಣಿ ಅಂತ ವಿಳಂಬ ಬೇಡ, ವಾರದೊಳಗೆ ರೋಶನ್ ಬೇಗ್ ಆಸ್ತಿ ಮುಟ್ಟುಗೋಲು ಹಾಕಿ: ಹೈಕೋರ್ಟ್ ಸೂಚನೆ
12/06/2021, 08:11
ಚಿತ್ರ:ಅನುಷ್ ಪಂಡಿತ್ ಮಂಗಳೂರು
ಬೆಂಗಳೂರು(reporterkarnataka news): ಬಹುಕೋಟ ಐಎಂಎ ಹಗರಣದ ಆರೋಪಿ, ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿಯನ್ನು ವಾರದೊಳಗೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಖಡಕ್ ಸೂಚನೆ ನೀಡಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಮತ್ತಿತರ ಠೇವಣಿದಾರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ.
ರಾಜಕಾರಣಿ ಎಂಬ ಕಾರಣಕ್ಕೆ ಜಪ್ತಿ ವಿಳಂಬ ಮಾಡುತ್ತಿರುವುದು ಕಾನೂನಿಗೆ ವಿರುದ್ಧವಾಗಿದೆ.
ಜಪ್ತಿಗೂ ಲಾಕ್‌ಡೌನ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಪೀಠವು ಅಭಿಪ್ರಾಯಪಟ್ಟಿದೆ.