12:52 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಆಜಾನ್ ವಿವಾದ: ಬೆಂಗಳೂರಿನಲ್ಲಿ 250 ಮಸೀದಿಗಳಿಗೆ ಪೊಲೀಸ್ ಇಲಾಖೆ ನೋಟಿಸ್‌ 

07/04/2022, 10:48

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಆಜಾನ್ ವಿವಾದದ ಬೆನ್ನೆಲ್ಲೇ ಕರ್ನಾಟಕದ ಮಸೀದಿಗಳಿಗೆ ಲೌಡ್ ಸ್ಪೀಕರ್ ಗಳನ್ನು ಅನುಮತಿ ನೀಡಲಾದ ಡೆಸಿಬಲ್ ಮಟ್ಟದಲ್ಲಿ ಬಳಸುವಂತೆ ಪೊಲೀಸರು ನೋಟಿಸ್ ನೀಡುತ್ತಿದ್ದಾರೆ.

ಈಗಾಗಲೇ ವಿವಿಧ ಸಂಘಟನೆಗಳು ಮಸೀದಿಗಳ ಮೇಲಿನ ಧ್ವನಿವರ್ಧಕಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ತೊಂದರೆ ಉಂಟುಮಾಡುತ್ತಿದ್ದು, ಅದನ್ನು ನಿಷೇಧಿಸುವಂತೆ ಒತ್ತಾಯಿಸಿ ಅಭಿಯಾನ ಪ್ರಾರಂಭಿಸಿದ್ದು, ಇದೀಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಬೆಂಗಳೂರು ಒಂದರಲ್ಲೇ ಸುಮಾರು 250 ಮಸೀದಿಗಳು ಪೊಲೀಸರಿಂದ ನೋಟಿಸ್‌ಗಳನ್ನು ಸ್ವೀಕರಿಸಿದ್ದು, ಮಸೀದಿಯ ಸಿಬ್ಬಂದಿ ಲೌಡ್ ಸ್ಪೀಕರ್ ಶಬ್ದವನ್ನು ಅನುಮತಿ ನೀಡಲಾದ ಮಟ್ಟದಲ್ಲಿ ಇರಿಸುವ ಸಾಧನಗಳನ್ನು ಅಳವಡಿಸಲು ಪ್ರಾರಂಭಿಸಿದ್ದಾರೆ.

ಧಾರ್ಮಿಕ ಸಂಸ್ಥೆಗಳು, ಪಬ್‌ಗಳು, ರಾತ್ರಿ ಕ್ಲಬ್‌ಗಳು ಮತ್ತು ಇತರ ಸಂಸ್ಥೆಗಳು ಮತ್ತು ಸಮಾರಂಭಗಳಲ್ಲಿ ಶಬ್ದ ಮಾಲಿನ್ಯ ನಿಯಮಗಳ ಉಲ್ಲಂಘನೆಯನ್ನು ಪರಿಶೀಲಿಸುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರು ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು