10:32 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಜೆಪ್ಪು ವಾರ್ಡ್: ನೂತನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ 

08/04/2022, 15:04

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಜೆಪ್ಪು ವಾರ್ಡಿನಲ್ಲಿ ನೂತನ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ನಗರದ ವಿವಿಧ ಭಾಗಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ತೀರ್ಮಾನಿಸಿದ್ದು, ಸಮುದಾಯದ ಒಗ್ಗಟ್ಟಿಗೆ ಅಂಬೇಡ್ಕರ್ ಭವನ ಸಹಕಾರಿಯಾಗಲಿದೆ‌. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಎಲ್ಲರೂ ಗೌರವಿಸಬೇಕು ಎಂದು ಶಾಸಕ ಕಾಮತ್ ಹೇಳಿದರು.

ಜೆಪ್ಪು ವಾರ್ಡ್ ಮನಪಾ ಸದಸ್ಯ ಭರತ್ ಕುಮಾರ್ ಎಸ್., ಪಾಲಿಕೆ ನಾಮನಿರ್ದೇಶಿತ ಸದಸ್ಯ ರಮೇಶ್ ಕಂಡೆಟ್ಟು, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುರೇಖಾ ರಾವ್, ಮಂಡಲ ಹಿಂದುಳಿದ ವರ್ಗಗಳ ಮೋಚಾದ ಪ್ರಧಾನ ಕಾರ್ಯದರ್ಶಿ ಗೌತಮ್ ಬೋಳಾರ್, ಎಸ್‌ಸಿ ಮೋರ್ಚಾ ಅಧ್ಯಕ್ಷ ರಘುವೀರ್ ಬಾಬುಗುಡ್ಡೆ, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಡಿಸಿಲ್ವ, ಅರ್ಶದ್ ಪೋಪಿ, ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಘಣಶ್ಯಾಮ್, ಶಕ್ತಿಕೇಂದ್ರ ಅಧ್ಯಕ್ಷೆ ಅಮಿತಾ ಕೆ., ಬೂತ್ ಅಧ್ಯಕ್ಷರಾದ ವಾಣೀಶ್ರೀ, ತರುಣ್ ಬಪ್ಪಾಲ್, ಜನಾರ್ಧನ್,  ರವೀಂದ್ರ ಎಸ್, ಶೈಲೇಶ್ ಕುಮಾರ್, ಪದ್ಮಾಕರ್, ಪ್ರಶಾಂತ್ ಕನಕರಬೆಟ್ಟು, ನಿರಂಜನ್ ಕುಮಾರ್ ಎಸ್, ಹೇಮಂತ್, ರಾಜೇಶ್ ಕುಮಾರ್,  ವಿಜಯ್ ಬೆನೆಡಿಕ್ಟ್, ಚಿತ್ರಾ ಬಪ್ಪಾಲ್, ನವೀನ್, ಬಾಬು, ಸಂತೋಷ್ ಕೋಟ್ಯಾನ್, ಸಂದೀಪ್ ಎಸ್, ಚಂದ್ರಹಾಸ್, ರಾಜ, ಕಿಶೋರ್, ತಾರಮಣಿ, ಇಂದಿರಾ, ಬೇಬಿ, ದೀನಾ, ಗಾಯತ್ರಿದೇವಿ, ವಿಶ್ವನಾಥ್ ಉಳ್ಳಾಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು