9:13 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಮುಂದಿನ ತಿಂಗಳಿನಿಂದ ಆರಂಭ

08/04/2022, 23:56

ಹೊಸದಿಲ್ಲಿ(reporterkarnataka.com): ಹುಬ್ಬಳ್ಳಿ -ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಹೊರ ಬಿದ್ದಿದೆ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಮೇ 1ರಿಂದ ಆರಂಭವಾಗಲಿದೆ.

ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭಿಸಲು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ  ಪ್ರಲ್ಹಾದ ಜೋಶಿಯವರು ಇಂಡಿಗೋ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದರು. ಸಚಿವರ ಮನವಿಗೆ ಸ್ಪಂದಿಸಿದ ಇಂಡಿಗೋ ಸಂಸ್ಥೆಯವರು ಇದೇ ಮೇ 1ರಿಂದ ವಾರದಲ್ಲಿ 4 ದಿನ ಮಂಗಳೂರಿಗೆ ಮತ್ತು ಮೇ 3ರಿಂದ ವಾರದಲ್ಲಿ 3 ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭಿಸಲಿದ್ದಾರೆ ಎಂದು ಸಚಿವರ ದೆಹಲಿ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಮೈಸೂರು, ಮಂಗಳೂರು ನಗರಗಳಿಗೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇದನ್ನು ಸಾಧ್ಯವಾಗಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಮತ್ತು ಇಂಡಿಗೋದ ಆಡಳಿತ ವರ್ಗಕ್ಕೆ ಸಚಿವ ಜೋಶಿಯವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು