7:34 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಟೇಕ್ವಾಂಡೊ ಅಂತಾರಾಷ್ಟ್ರೀಯ ಕೂಟ: ಮಂಗಳೂರಿನ ಸಂಹಿತಾ ಅಲೆವೂರಾಯಗೆ ಚಿನ್ನ

10/04/2022, 19:55

ಮಂಗಳೂರು(reporterkarnataka.com): ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಐಎಂಎಎ ಮುಕ್ತ ಅಂತಾರಾಷ್ಟ್ರೀಯ ಟೇಕ್ವಾಂಡೊ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನದ ಪದಕ ಗಳಿಸಿದ್ದಾರೆ.

೪೬ ಕಿಲೊ ವಿಭಾಗದಲ್ಲಿ ಸ್ಪರ್ಧಿಸಿದ್ದು, ಇವರು ತಲಪಾಡಿ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿ. ಕುಂಜತ್ತೋಡಿ ವಾಸುದೇವ ಭಟ್‌ ಕದ್ರಿ ಮತ್ತು ದೀಪಾ ಕೆ.ಎಸ್.‌ ದಂಪತಿ ಪುತ್ರಿ. ಏ.೭ರಿಂದ ೯ರವರೆಗೆ ಕಠ್ಮಂಡುವಿನ ದಶರಥ ನಗರ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕರ್ನಾಟಕ ಟೇಕ್ವಾಂಡೊ ಸಂಸ್ಥೆಯ ಸದಸ್ಯ ಡಾ.ಗುರುರಾಜ್‌ ಇಟಗಿ , ಕಾರ್ಯದರ್ಶಿ ಅನಿಲ್‌ ಕುಮಾರ್‌ ಮಾರ್ಗದರ್ಶಕರಾಗಿ ಭಾಗವಹಿಸಿದ್ದರು.

ಸಂಹಿತಾ ಅವರ ತಾಯಿ ದೀಪಾ ಕೆ.ಎಸ್.‌ ಮತ್ತು ಸಹೋದರ ಋತ್ವಿಕ್‌ ಅಲೆವೂರಾಯ ಅವರು ಅಂತಾರಾಷ್ಟ್ರೀಯ ಮಟ್ಟದ ಪವರ್‌ ಲಿಪ್ಟಿಂಗ್‌ ಕೂಟದಲ್ಲಿ ಚಿನ್ನದ ಪದಕಗಳನ್ನು ಪಡೆದಿದ್ದಾರೆ.

 

ಇತ್ತೀಚಿನ ಸುದ್ದಿ

ಜಾಹೀರಾತು