9:53 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ…

ಇತ್ತೀಚಿನ ಸುದ್ದಿ

ಗುಡಿಸಲಿನಲ್ಲಿ ಅರಳಿದ ಕವಿತೆ ಕಲಾ ಗ್ರಾಮದಲ್ಲಿ ಲೀನ: ಸಕಲ ಸರಕಾರಿ ಗೌರವದೊಂದಿಗೆ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ

12/06/2021, 18:07

ಬೆಂಗಳೂರು(reporterkarnataka news): ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.

ಸರಕಾರದ ಪರವಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಅಂತಿಮ ನಮನ ಸಲ್ಲಿಸಿದರು. ಶಾಸಕ ಮುನಿರತ್ನ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತ ಗೌರವ ಗುಪ್ತ ಅಗಲಿದ ಕವಿಗೆ ನಮನ ಅರ್ಪಿಸಿದರು.

ಇದಕ್ಕೆ ಮುನ್ನ ಜ್ಞಾನ ಭಾರತಿಯ ಬಾಬಾ ಸಾಹೇಬ್​ ಡಾ.ಬಿ.ಆರ್.ಅಂಬೇಡ್ಕರ್​ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ಸಿದ್ದಲಿಂಗಯ್ಯ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ, ಸಂಸದ ಡಿ.ಕೆ ಸುರೇಶ್, ದುನಿಯಾ ವಿಜಯ್, ಡಾಲಿ ಧನಂಜಯ ಮುಂತಾದವರು ಅಂತಿಮ ದರ್ಶನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು