11:14 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ಸನ್ ಶೈನಿಂಗ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರನ ರಾಜಕೀಯ ರಂಗ ಪ್ರವೇಶಕ್ಕೆ ಮುನ್ನುಡಿ

11/04/2022, 08:39

ಬೆಳಗಾವಿ(reporterkarnataka.com): ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ರಂಗದಲ್ಲಿ ಸನ್ ಶೈನಿಂಗ್ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಆರ್. ಗುಂಡೂ ರಾವ್, ಎಸ್. ಬಂಗಾರಪ್ಪ ಅವರ ಪುತ್ರರೆಲ್ಲ ಈಗಾಗಲೇ ರಾಜಕೀಯ ರಂಗದಲ್ಲಿ ಮಿಂಚಲಾರಂಭಿಸಿದ್ದಾರೆ. ಅವರ ಜತೆಗೆ ಮಂತ್ರಿಗಳ, ಮಾಜಿ ಮಂತ್ರಿಗಳ, ಕೇಂದ್ರ ಸಚಿವರುಗಳ, ಮಾಜಿ ಕೇಂದ್ರ ಸಚಿವರುಗಳ ಪುತ್ರ, ಪುತ್ರಿಯರು ಕೂಡ ರಂಗಪ್ರವೇಶ ಈಗಾಗಲೇ ಮಾಡಿದ್ದಾರೆ. ಇದೀಗ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ರಾಜಕೀಯ ಪ್ರವೇಶಕ್ಕೆ ಸಿದ್ದತೆ ನಡೆಯುತ್ತಿದೆ. 

ಈ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಅವರ ಉಪಸ್ಥಿತಿಯಲ್ಲೇ ಪುತ್ರ ರಾಹುಲ್ ಜಾರಕಿಹೊಳಿ ಅವರ ಪತ್ರಿಕಾಗೋಷ್ಠಿ ನಡೆದಿದೆ. ಬೆಳಗಾವಿಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ನಿವಾಸದ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆದಿದೆ. ಪುತ್ರ ರಾಹುಲ್ ಮಾಧ್ಯಮದ ಮಂದಿಯನ್ನು ಉದ್ದೇಶಿಸಿ ಮಾತನಾಡುವಾಗ ಪಕ್ಕದಲ್ಲೇ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರು ನಿಂತಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ಸಮಾಜ ಸೇವೆಯೇ ನಮ್ಮ ಮುಖ್ಯಗುರಿಯಾಗಿದ್ದು ಸಮಾಜದ ಅಭಿವೃದ್ಧಿಗಾಗಿ ನನ್ನ ವೈಯಕ್ತಿಕ ಹಿತಾಸಕ್ತಿಗಳನ್ನು ತ್ಯಾಗ ಮಾಡುತ್ತೇನೆ ಎಂದು ಹೇಳಿದರು.

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ, ಏಪ್ರಿಲ್ 12 ಹಾಗೂ 13ರಂದು ಜಿಲ್ಲಾ ಪುರುಷ ಹಾಗೂ ಮಹಿಳಾ ಕಬಡ್ಡಿ ಪಂದ್ಯಾವಳಿಯನ್ನು ಸಿದ್ದೇಶ್ವರ ಪ್ರೌಢ ಶಾಲೆ ಮುಚ್ಚಂಡಿಯಲ್ಲಿ ನಡೆಸುವ ಕುರಿತು ಅವರು ವಿವರಣೆ ನೀಡಿದರು.

ಈಗಾಗಲೇ 65 ತಂಡಗಳು ತಮ್ಮ ಹೆಸರು ನೋಂದಾಯಿಸಿವೆ. ಅದರಲ್ಲಿ 10 ಮಹಿಳಾ ಕಬಡ್ಡಿ ತಂಡಗಳಿವೆ. ಆಟಗಾರರಿಗೆ ಊಟ, ವಸತಿ ಮತ್ತು ಕ್ರೀಡಾ ಸಾಮಗ್ರಿಗಳನ್ನು ಒದಗಿಸಲಾಗುತ್ತದೆ. ಕ್ರೀಡಾ ವೀಕ್ಷಣೆಗೆ ಸುಮಾರು 3500 ಜನರಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ನುಡಿದರು.

ವಿಜೇತರಿಗೆ ಪ್ರಥಮ ಬಹುಮಾನ 30 ಸಾವಿರ, ದ್ವಿತಿಯ ಬಹುಮಾನ 20 ಸಾವಿರ ಹಾಗೂ ತೃತೀ

ಯ ಬಹುಮಾನ 10 ಸಾವಿರ ರೂ.ನಗದು ನಿಗದಿ ಮಾಡಲಾಗಿದೆ. ಕ್ರೀಡೆ, ಸಾಂಸ್ಕೃತಿಕ ಚಟುವಟಕೆಗಳಿಗೆ ನಮ್ಮ ತಂದೆ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದು ನಾವು ಅದನ್ನು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ ಎಂದರು.

ಇನ್ನೂ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿ ಎಲ್ಲವೂ ತಂದೆಯವರ ಮಾರ್ಗದರ್ಶನದಂತೆ ಎಂದು ಹೇಳುತ್ತಾ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು