1:26 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಕಳಚಿದ ಬಲಿಪ ಪರಂಪರೆಯ ಕೊಂಡಿ ; ಗಾನ ನಿಲ್ಲಿಸಿದ ಪ್ರಸಾದ್ ಬಲಿಪ ಭಾಗವತರು

11/04/2022, 19:59

ಮಂಗಳೂರು(Reporterkarnataka.com) ಕಟೀಲು ಮೇಳದ ಪ್ರಧಾನ ಭಾಗವತ, ಬಲಿಪ ಪರಂಪರೆಯ ಕೊಂಡಿ ಪ್ರಸಾದ ಬಲಿಪ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೇಳದ ತಿರುಗಾಟದಲ್ಲಿ ಈ ಬಾರಿ ಇರಲಿಲ್ಲ. ತೆಂಕುತಿಟ್ಟು ಯಕ್ಷಗಾನದ ಬಲಿಪ ಪರಂಪರೆಯ ಬಲಿಪ ನಾರಾಯಣ ಭಾಗವತರ ಪುತ್ರರಾದ ಬಲಿಪ ಪ್ರಸಾದ್ ಅವರು, ರಕ್ತಗತವಾಗಿ ಬಂದಿದ್ದ ಯಕ್ಷಗಾನ ಭಾಗವತಿಕೆಯನ್ನು ಮೈಗೂಡಿಸಿಕೊಂಡು ಕಟೀಲು ಎರಡನೆಯ ಮೇಳದ ಪ್ರಧಾನ ಭಾಗವತರಾಗಿದ್ದರು.

ತಂದೆಯ ಬಳಿಕ ಬಲಿಪ ಶೈಲಿಯ ಭಾಗವತಿಕೆ ಮೂಲಕ ಮಿಂಚಿದ್ದರು. ತಂದೆ, ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು