1:43 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಬಿ ಹೊಸಳ್ಳಿ ರಸ್ತೆಗಳ ಅಭಿವೃದ್ದಿಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

12/04/2022, 10:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ:ಬಿ ಹೊಸಹಳ್ಳಿ ಗ್ರಾ.ಪಂ ವ್ಯಾಪ್ತಿಯ ರಸ್ತೆಗಳ ಅಭಿವೃದ್ದಿಗೆ ಆಗ್ರಹಿಸಿ ಬಿ ಹೊಸಹಳ್ಳಿ ಗ್ರಾಮಸ್ಥರು ಬಿ.ಹೊಸಹಳ್ಳಿ ಭಾರತಿಬೈಲ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಬಿ.ಹೊಸಳ್ಳಿ ಗ್ರಾ.ಪಂ ಸದಸ್ಯ ಆಶ್ರಿತ್ ಮಾತನಾಡಿ, ಚಕಮಕ್ಕಿಯಿಂದ ಭಾರತಿಬೈಲು ಂಪರ್ಕಿಸುವ ರಸ್ತೆ ಸೇರಿದಂತೆ ವಿವಿಧ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಸುಮಾರು 2 ದಶಕಗಳಿಂದ ರಸ್ತೆ ಅಭಿವೃದ್ದಿಯಾಗಿಲ್ಲ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಕೂಡಲೇ ರಸ್ತೆ ಅಭಿವೃದ್ದಿ ಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿದ ಮಾಜಿ ಸಚಿವೆ ಮೋಟಮ್ಮ ಮಾತನಾಡಿ ಅತಿವೃಷ್ಟಿ ಸಂದರ್ಭದಲ್ಲಿ ನೆರೆ ಹಾನಿ ಕಾಮಗಾರಿಗೆ ಬಂದ ಕೋಟ್ಯಾಂತರ ರೂ ಅನುದಾನ ಯಾವ ಗ್ರಾಮಗಳಿಗೆ ಬಳಕೆಯಾಗಿದೆ ಎಂಬುದನ್ನು ಸಂಬಂಧಪಟ್ಟವರು ಸ್ಪಷ್ಟಪಡಿಸಬೇಕು. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಸರಿಪಡಿಸಲು ಮುಂದಾಗಬೇಕು ಎಂದರು.

ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಬಿ.ಬಿ ನಿಂಗಯ್ಯ, ಚುನಾಯಿತ ಸರ್ಕಾರ ಬಿ ಹೊಸಳ್ಳಿ ಗ್ರಾಮದ ರಸ್ತೆ ಅಭಿವೃದ್ದಿಗೆ ಮುಂದಾಗಬೇಕು. ಕಾಫಿ ಬೆಳೆಗಾರರು, ವಿದ್ಯಾರ್ಥಿಗಳು, ಕಾರ್ಮಿಕರು ಹೆಚ್ಚಿರುವ ಈ ಗ್ರಾಮದ ರಸ್ತೆ ಅಭಿವೃದ್ದಿ ಮಾಡಬೇಕಿದೆ ಎಂದರು.

ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸ್ಥಳದಲ್ಲಿಯೇ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಶೀಘ್ರವಾಗಿ ರಸ್ತೆ ಅಭಿವೃದ್ದಿ ಮಾಡುವಂತೆ ತಿಳಿಸಿದರು. ನಂತರ ಮಾತನಾಡಿದ ಅವರು, ರಸ್ತೆ ಅಭಿವೃದ್ದಿಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಮಾತನಾಡಿದ್ದು ರಸ್ತೆ ಅಭಿವೃದ್ದಿಗೆ ಮುಂದಾಗದಿದ್ದರೇ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಿರತರ ಹೋರಾಟಕ್ಕೆ ಬೆಂಬಲ ಸೂಚಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಸರಸ್ವತಿ, ಯೋಗೇಶ್, ಬಸವರಾಜ್, ಪ್ರವೀಣ್, ಸುರೇಶ್,  ಶಿವಕುಮಾರ್, ಸಂತೋಷ್, ಗ್ರಾಮಸ್ಥರಾದ ಅರ್ಜುನ್, ಅಣ್ಣಪ್ಪ, ಗಣೇಶ್,ವರುಣ್, ಆದರ್ಶ್,ಪ್ರಸನ್ನ, ರಮೇಶ್, ದಿನೇಶ್ ಮುಂತಾದವರು ಇದ್ದರು

ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಬಿ ಹೊಸಳ್ಳಿ ಕಾಲೋನಿಗೆ 20 ಲಕ್ಷ, ಬಿ ಹೊಸಳ್ಳಿ ಭಾರತಿಬೈಲ್ ಸಂಪರ್ಕ ರಸ್ತೆಗೆ 50 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಗ್ರಾಮದ ಕೆಲ ವ್ಯಕ್ತಿಗಳು ರಸ್ತೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು ಗ್ರಾಮದ ಅಭಿವೃದ್ದಿಗೆ ಪಕ್ಷಾತೀತವಾಗಿ ಸಹಕಾರ ನೀಡುತ್ತೇವೆ’

-ಮಂಜುನಾಥಗೌಡ, ಮಾಜಿ ಪ್ರಧಾನರು, ಬಿ.ಹೊಸಹಳ್ಳಿ.

ಇತ್ತೀಚಿನ ಸುದ್ದಿ

ಜಾಹೀರಾತು