7:38 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಕಾರ್ಮೆಲ್ ಡಿಗ್ರಿ ಕಾಲೇಜಿಗೆ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” ಪ್ರಶಸ್ತಿಯ ಗರಿ.

07/05/2021, 15:52

ಮಂಗಳೂರು(reporterkarnatakanews): ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಮಂಡಳಿಯು ಆಯೋಜಿಸಿದ “ಒಂದು ಜಿಲ್ಲೆ ಒಂದು ಹಸಿರು ಚಾಂಪಿಯನ್” (ಒನ್ ಡಿಸ್ಟ್ರಿಕ್ಟ್ ಒನ್ ಗ್ರೀನ್ ಚಾಂಪಿಯನ್) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕಿನ ಕಾರ್ಮೆಲ್ ಕಾಲೇಜ್ ಮೊಡಂಕಾಪು ಮುಡಿಗೇರಿಸಿಕೊಂಡಿದೆ. ಕಾಲೇಜಿನ ಸ್ವಚ್ಛತಾ ಕ್ರಿಯಾ ಯೋಜನೆ 2020 21 (ಎಸ್.ಎ.ಪಿ) ಸಮಿತಿಯು “ಸ್ವಚ್ಛತಾ ಶಿಕ್ಷಣ ಹಾಗೂ ಅಭ್ಯಾಸ”ಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿಯು ಒಲಿದು ಬಂದಿದೆ.

ಈ ಪ್ರಶಸ್ತಿಗಾಗಿ ದೇಶದಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳು ಸ್ಪರ್ಧಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಪ್ರಶಸ್ತಿಯು ಕಾರ್ಮೆಲ್ ಡಿಗ್ರಿ ಕಾಲೇಜಿಗೆ ಬಂದಿರುವುದು ಅತೀವ ಸಂತೋಷದ ವಿಷಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಡಾ.ಸಿಸ್ಟರ್ ಲತಾ ಫರ್ನಾಂಡಿಸ್ ಎ ಸಿ ಅವರು ತಿಳಿಸಿರುತ್ತಾರೆ.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು, ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿಗಳಾದ ಶ್ರೀಮತಿ ಮಧುರ ಕೆ, ಕುಮಾರಿ ದೀಪ್ತಿ ಡಿಸೋಜಾ, ಹಿಂದಿ ಉಪನ್ಯಾಸಕರಾದ ಶ್ರೀಮತಿ ಚಂದ್ರಿಕಾ ರಾವ್ ರನ್ನ ಒಳಗೊಂಡ ‘ಸ್ವಚ್ಛತಾ ಕ್ರಿಯಾ ಯೋಜನಾ’ ಸಮಿತಿ ( ಎಸ್.ಎ.ಪಿ) ಯ ಅತ್ಯಂತ ಮಹತ್ವಪೂರ್ಣ ಯಶಸ್ವಿ ಕಾರ್ಯಚಟುವಟಿಕೆಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಶ್ಲಾಘಿಸಿದೆ. ಈ ಪ್ರಶಸ್ತಿಯನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿಯವರು ಪ್ರಧಾನ ಮಾಡಲಿರುವರು

ಇತ್ತೀಚಿನ ಸುದ್ದಿ

ಜಾಹೀರಾತು