ಇತ್ತೀಚಿನ ಸುದ್ದಿ
ಪೊಳಲಿ ರಾಜರಾಜೇಶ್ವರಿಯ ದರ್ಶನ ಪಡೆದ ಮುಖ್ಯಮಂತ್ರಿ ಬೊಮ್ಮಾಯಿ: ವಿಶೇಷ ಪೂಜೆ ಸಲ್ಲಿಕೆ
12/04/2022, 23:25
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಯಾತ್ರಾ ಸ್ಥಳ ಬಂಟ್ವಾಳ ತಾಲೂಕಿನ ಪೊಳಲಿಯ ರಾಜರಾಜೇಶ್ವರಿ ದೇವಸ್ಥಾನಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ರಾತ್ರಿ ಭೇಟಿ ನೀಡಿ ಶ್ರೀ ರಾಜರಾಜೇಶ್ವರಿ ಮಾತೆಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ದೇವಸ್ಥಾನದ ಮೋಕ್ತೇಸರ ಡಾ. ಮಂಜಯ್ಯ ಶೆಟ್ಟಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ, ತಹಶೀಲ್ದಾರ್ ರಶ್ಮೀ ಹಾಗೂ ಇತರರು ಉಪಸ್ಥಿತರಿದ್ದರು.