ಇತ್ತೀಚಿನ ಸುದ್ದಿ
ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ: ಬಿಜೆಪಿ ನಾಯಕರು ಗೈರು; ಕಾಂಗ್ರೆಸ್ ನ ಲಕ್ಷ್ಮಿ ಹೆಬ್ಬಾಳ್ಕರ್ ಹಾಜರು
14/04/2022, 12:32
ಬೆಳಗಾವಿ(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿಗೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನೆರವೇರಿತು.
ಸಂತೋಷ್ ಪಾಟೀಲ್ ಅವರ ಪಾರ್ಥಿವ ಶರೀರವನ್ನು ಅವರ ಬಡಸ ಗ್ರಾಮದ ತೋಟದ ಮನೆಯ ಎದುರು ಇರಿಸಿ ಅಂತಿಮ ಪೂಜೆ ಸಲ್ಲಿಸಲಾಯಿತು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉಡುಪಿಯ ಖಾಸಗಿ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಮೃತದೇಹವನ್ನು ಬುಧವಾರ ರಾತ್ರಿಯೇ ಪೊಲೀಸ್ ಬಂದೋಬಸ್ತ್‌ನಲ್ಲಿ ಅವರ ಹುಟ್ಟೂರಿಗೆ ಸಾಗಿಸಲಾಗಿತ್ತು.
ಅಂತ್ಯ ಸಂಸ್ಕಾರದ ವೇಳೆ ಯಾವುದೇ ಬಿಜೆಪಿ ನಾಯಕರು ಉಪಸ್ಥಿತರಿರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಂತ್ಯ ಸಂಸ್ಕಾರ ನಡೆಯುವ ಸ್ಥಳಕ್ಕೆ ಆಗಮಿಸಬೇಕೆಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸ್ಥಳೀಯರು ಆಗ್ರಹಿಸಿದರು. ಆದರೆ ಸಚಿವರು ಆಗಮಿಸಲಿಲ್ಲ.