3:21 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ವೃತ್ತಕ್ಕೆ ಹೆಸರಿಡುವ ಹಿಂದಿದೆ ನಾರಾಯಣ ಗುರುಗಳ ಆದರ್ಶ ಪಾಲಿಸಬೇಕೆಂಬ ಸಂದೇಶ : ವಿ.ಸುನೀಲ್ ಕುಮಾರ್

14/04/2022, 20:50

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು (reporterkarnataka.com):ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.


ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆ ಬಳಿಯ ವೃತ್ತಕ್ಕೆ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರಿನಲ್ಲಿ ನಾರಾಯಣ ಗುರುಗಳಿಂದ ಕುದ್ರೋಳಿ ದೇವಾಲಯ ಸ್ಥಾಪಿಸಲ್ಪಟ್ಟಿತ್ತು ಆವಾಗಿನಿಂದಲೇ ಮಂಗಳೂರು ಹಾಗೂ ನಾರಾಯಣಗುರುಗಳ ನಡುವೆ ನಂಟಿದೆ. ನಾರಾಯಣಗುರುಗಳು ಪ್ರಾಥಃಸ್ಮರಣೀಯರು, ತಳಮಟ್ಟದಲ್ಲಿದ್ದ ಸಮುದಾಯವನ್ನು ಮೇಲುಸ್ತರಕ್ಕೆ ತರಲು ಸೌಹಾರ್ದತೆಯನ್ನು ಸಾರಿ ಅಸ್ಪ್ರಸ್ತೆಯನ್ನು ನಿವಾರಣೆ ಮಾಡಲು ಮುನ್ನಡಿ ಇಟ್ಟಿರುವುದನ್ನು ನಾವು ಅರಿತಿದ್ದೇವೆ, ಇಂತಹ ಆದರ್ಶಗಳು ಪೀಳಿಗೆಗಿಂದ ಪೀಳಿಗೆಗೆ ಸಾಗಲು ಈ ರೀತಿಯಾಗಿ ಸ್ಮರಣೀಯವಾಗಿ ಉಳಿಯಲು ವೃತ್ತಗಳಿಗೆ, ಸ್ಮಾರಕಗಳಿಗೆ ನಾಮಕರಣ ಮಾಡುವುದು ಪೂರಕ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹೃದಯದಲ್ಲಿ ನಾರಾಯಣ ಗುರುಗಳ ಬಗ್ಗೆ ಅಭಿಮಾನ ಇದ್ದಿದ್ದರೆ ಯಾರೂ ರಾಜಕೀಯ ಮಾಡುತ್ತಿರಲಿಲ್ಲ, ಅವರು ಅಧಿಕಾರದಲ್ಲಿದ್ದಾಗ ಈ ಕಾರ್ಯ ಮಾಡಬಹುದಿತ್ತು, ಅದೂ ಆಗಲಿಲ್ಲ, ಈಗ ನಾವು ಮಾಡಿದ್ರು ಕಾರ್ಯಕ್ರಮದ ಹಿಂದಿನಿಂದ ತೊಂದರೆ ಕೊಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕುಟುಕಿದರು.

un
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ., ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು