ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ: ಬೆಳಗಾವಿ, ವಿಜಯಪುರದಲ್ಲಿ ಸಿಡಿಲಿಗೆ 2 ಬಲಿ
15/04/2022, 19:24
ಬೆಂಗಳೂರು(reporterkarnataka.com) : ಮಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ.
ರಾಜ್ಯದಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಭಾರೀ ಮಳೆಯಾಗಿದ್ದು, ಬೆಳಗಾವಿ ಜಿಲ್ಲೆಯ ತುಮ್ಮರ ಗುದ್ದಿ ಗ್ರಾಮದಲ್ಲಿ ಸಿಡಿಲು ಬಡಿದು ಭೀಮಪ್ಪ ಅಡಿವೆಪ್ಪ ಎಂಬುವರು ಸಾವನ್ನಪ್ಪಿದ್ದಾರೆ. ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಜಮೆರೆಮಸಾಬ ಸಾಹೇಬಲಾಲ ಜಾತಗಾರ ಎಂಬುವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಇಂದು ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳ ಹಲವು ಕಡೆ ಏಪ್ರಿಲ್ 18 ರವರೆಗೆ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು,ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.