5:04 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಜಗತ್ತಿಗೆ ಶಾಂತಿ ಸಂದೇಶ ಸಾರಿದ ಭಗವಾನ್ ಮಹಾವೀರರ ಆದರ್ಶಗಳ ಪಾಲಿಸಿ: ಶಾಸಕ ವೇದವ್ಯಾಸ ಕಾಮತ್ 

15/04/2022, 20:55

ಮಂಗಳೂರು(reporterkarnataka.com) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಬಜಿಲಕೇರಿಯಲ್ಲಿರುವ ಶ್ರೀ ಆದೀಶ್ವರ ಸ್ವಾಮಿ ಜೈನ ಬಸದಿಯಲ್ಲಿ ಭಗವಾನ್ ಮಹಾವೀರರ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿದ ಶಾಸಕರಾದ ವೇದವ್ಯಾಸ ಕಾಮತ್ ಅವರು, ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಮಹಾಪುರುಷ ಭಗವಾನ್ ಮಹಾವೀರರ ಅವರ ಆದರ್ಶಗಳು ಸಮಾಜ ಎಲ್ಲ ವರ್ಗದವರೂ ಅನುಸರಿಸುವಷ್ಟು ಶ್ರೇಷ್ಠವಾದವು ಎಂದರು.

ಸಮಾಜವನ್ನು ಯಶಸ್ವಿಯಾಗಿ ಕಟ್ಟುವಲ್ಲಿ ಜೈನ ಸಮುದಾಯದ ಕೊಡುಗೆ ಅಪಾರ. ಜೈಲ್ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನಕ್ಕೆ ಸರ್ಕಾರದಿಂದ 1 ಕೋಟಿ ರೂ., ಜೈನ ಬಸದಿಯ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ ಒದಗಿಸಲಾಗುವುದು, ಪಂಪ್‌ವೆಲ್‌ನ ತೆಗೆದಿರಿಸಲಾಗಿರವ ಕಲಶವನ್ನು ಶೀಘ್ರ ಸೂಕ್ತ ಸ್ಥಳದಲ್ಲಿ ಮತ್ತೆ ಪ್ರತಿಷ್ಠಾಪಿಸಿ ಮಹಾವೀರ ವೃತ್ತ ಎಂದು ನಾಮಕರಣ ಮಾಡಲಾಗುವುದು ಎಂದವರು ಹೇಳಿದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜೈನ್ ಸೊಸೈಟಿ ಉಪಾಧ್ಯಕ್ಷ ಸುರೇಶ್ ಬಲ್ಲಾಳ್, ಕಾರ್ಯದರ್ಶಿ ಪುಪ್ಪರಾಜ್ ಜೈನ್,  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಹಾಗೂ ಇತರರು ಉಪಸ್ಥಿತರಿದ್ದರು.

ಡಾ. ಸುದರ್ಶನ್ ಕುಮಾರ್ ಜಯಂತಿ ಸಂದೇಶ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು