6:05 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ಆಡಳಿತ ಮಂಡಳಿ ಆಯ್ಕೆ

15/04/2022, 23:13

ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ದೇವಾಲಯಗಳಲ್ಲೊಂದಾದ ರಥಬೀದಿಯಲ್ಲಿರುವ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯನ್ನು ನ್ಯಾಯಾಲಯದ ಆದೇಶಾನುಸಾರ ಪುನರ್ ರಚಿಸುವ ಸಲುವಾಗಿ ಚುನಾವಣೆ ಗುರವಾರ ನಡೆಯಿತು. 

ಸ್ಪರ್ಧಿಸಿದ ಒಟ್ಟು 11 ಅಭ್ಯರ್ಥಿಗಳಲ್ಲಿ ಅಡಿಗೆ ಬಾಲಕೃಷ್ಣ ಶೆಣೈ,  ಎಂ.ಕಿರಣ್ ಪೈ, ಎಂ.ಸತೀಶ್ ಪ್ರಭು, ಕೆ. ಗಣೇಶ್ ಕಾಮತ್ ಹಾಗೂ ಎಂ. ಜಗನ್ನಾಥ್ ಕಾಮತ್ ಮುಂದಿನ 5 ವರ್ಷಗಳ ಅವಧಿಗೆ ಶ್ರೀ ದೇವಳದ ಮುಕ್ತೇಸರರಾಗಿ ಆಯ್ಕೆಗೊಂಡರು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಾಸಿಸುವ ಹದಿನೆಂಟು ವರ್ಷ ಮೇಲ್ಪಟ್ಟ ಸಮಾಜ ಬಾಂಧವರಿಗೆ ಮತದಾನದಲ್ಲಿ ಭಾಗವಹಿಸುವ  ಅವಕಾಶ ಕಲ್ಪಿಸಲಾಗಿತ್ತು. 

ಬೆಳಗ್ಗೆ 8.00ಕ್ಕೆ ಮತದಾನ ಪ್ರಾರಂಭವಾಗಿ ಸಂಜೆ 7.೦೦ಕ್ಕೆ ಮುಕ್ತಾಯಗೊಂಡಿತು. ಶ್ರೀ ದೇವಳದ ನಿಯೋಜಿತ ಚುನಾವಣಾ ಅಧಿಕಾರಿಯಾಗಿದ್ದ ನ್ಯಾಯವಾದಿ ನಾಗೇಶ್ ಕುಮಾರ್ ಮತ್ತು ಸಹಾಯಕ ಚುನಾವಣಾ ಅಧಿಕಾರಿಯಾಗಿದ್ದ ಪ್ರೇಮಾನಂದ ಕಿಣಿ ಹಾಗೂ ಸ್ವಯಂಸೇವಕರು ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.  ಶುಕ್ರವಾರ ಬೆಳಿಗ್ಗೆ ಮಾಜಿ ಮೊಕ್ತೇಸರರಾದ ಸಿ . ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ರವರು ತಮ್ಮ ಅಧಿಕಾರ ಹಾಗೂ ದೇವಳದ ಕೀಲಿಗಳನ್ನು ಶ್ರೀ ದೇವರ ಸಮ್ಮುಖದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾಜಿ ಮೊಕ್ತೇಸರರಾದ ಎಂ . ಪದ್ಮನಾಭ ಪೈ  , ಕೊಚ್ಚಿಕಾರ್ ಜಯರಾಜ್ ಪೈ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು