1:41 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೋಲಾರ: 2ನೇ ಹಂತದ ಕೆಸಿ ವ್ಯಾಲಿ ಕಾಮಗಾರಿ ಕೈಗೊಳ್ಳಲು ಸರಕಾರ 450 ಕೋಟಿ ಬಿಡುಗಡೆ 

16/04/2022, 13:16

ಶಬೀರ್ ಅಹಮ್ಮದ್  ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸಾಮರಸ್ಯ ಇದ್ದರೆ ಮಾತ್ರ ನೆಮ್ಮದಿ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ . ವೈ.ಎ.ನಾರಾಯಣಸ್ವಾಮಿ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ  ಏರ್ಪಡಿಸಿದ್ದ ಸೀತಾರಾಮ ಕಲ್ಯಾಣೋತ್ಸವ ಸಮಾರಂಭದಲ್ಲಿ ಗ್ರಾಮದ ಅಲ್ಪ ಸಂಖ್ಯಾತರಿಗೆ ವಿವಿಧ ಸೌಲಭ್ಯ ವಿತರಿಸಿ ಅವರು ಮಾತನಾಡಿದರು.

ಯಚ್ಚನಹಳ್ಳಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲಾಗಿದೆ. ಗ್ರಾಮಸ್ಥರಿಗೆ ಅಗತ್ಯವಾದ ಎಲ್ಲ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಎರಡನೇ ಹಂತದಲ್ಲಿ ಕೆಸಿ ವ್ಯಾಲಿ ಕಾಮಗಾರಿ ಕೈಗೊಳ್ಳಲು ಸರ್ಕಾರ ರೂ .450 ಕೋಟಿ ಬಿಡುಗಡೆ ಮಾಡಿದೆ . ಮುದುವಾಡಿ ಕೆರೆಯಿಂದ ಯಚ್ಚನಹಳ್ಳಿ ಗ್ರಾಮಕ್ಕೆ ಕೆಸಿ ವ್ಯಾಲಿ ನೀರು ಹರಿಸಲಾಗುವುದು . ಈ ಕೆರೆಯಿಂದ ಉಳಿದ ಕೆರೆಗಳಿಗೆ ನೀರು ಹರಿಸಲಾಗುವುದು . ತಾಲ್ಲೂಕಿನ 100 ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಮಂಜೂರು ಮಾಡಲಾಗಿದೆ . ಶ್ರಮ ಶಕ್ತಿ ಯೋಜನೆಯಡಿ ಗ್ರಾಮದ 90 ಅಲ್ಪ ಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ ರೂ .10 ಸಾವಿರ ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು . ಬಿಜೆಪಿ ಸರ್ಕಾರ ಅಲ್ಪಸಖ್ಯಾತರ ಹಿತ ಕಾಯಲು ಬದ್ಧವಾಗಿದೆ . ಬಿಜೆಪಿ ಅಲ್ಪ ಸಂಖ್ಯಾತರ ವಿರೋಧಿ ಅಲ್ಲ . ಕಾಂಗ್ರೆಸ್ ಮತದಾಸೆಗಾಗಿ ಅವರನ್ನು ದಾರಿತಪ್ಪಿಸುತ್ತಿದೆ . ಬಿಜೆಪಿ ದೇಶ ವಿರೋಧಿಗಳನ್ನು ವಿರೋಧಿ ಸುತ್ತದೆಯೇ ಹೊರತು ಅಲ್ಪ ಸಂಖ್ಯಾತರನ್ನಲ್ಲ . ಕೇಂದ್ರ ಸರ್ಕಾರ ಮುಸ್ಲಿಂ ಮಹಿಳೆಯರ ಹಿತದೃಷ್ಟಿ ಯಿಂದ ತಲಾಖ್ ರದ್ದುಪಡಿಸಿದೆ . ಹಾಗಾಗಿ ಮುಸ್ಲಿಂ ಸಮುದಾಯ ಬಿಜೆಪಿಯೊಂದಿಗೆ ಕೈಜೋಡಿಸಬೇಕು . ರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು . ಈ ಸಂದರ್ಭದಲ್ಲಿ ಗ್ರಾಮದ ಅಭಯಾಂಜನೇಯಸ್ವಾಮಿ ಆಲಯದ ಆವರಣದಲ್ಲಿ ಗ್ರಾಮಸ್ಥರ ವತಿಯಿಂದ ಏರ್ಪಡಿಸಲಾಗಿದ್ದ ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಲಾಯಿತು . ಈ ಕಾರ್ಯಕ್ರಮದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಜನರು ಭಾಗವಹಿಸಿದ್ದರು . ಸಮಾರಂಭದಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ಮಂಜೂರಾತಿ ದಾಖಲೆಗಳನ್ನು ವಿತರಿಸಲಾಯಿತು . ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ . ಕೆ.ಎನ್.ವೇಣುಗೋಪಾಲ್ , ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ರೆಡ್ಡಿ , ಮುಖಂಡ ರಾದ ಜಯರಾಮರೆಡ್ಡಿ , ರೆಡ್ಡಪ್ಪ , ನಾರಾಯಣ ಸ್ವಾಮಿ , ನಾರಾಯಣಗೌಡ , ಶಫಿವುಲ್ಲಾ , ಫೈರೋಜ್ , ರಮೇಶ್ , ನಾರಾಯಣಸ್ವಾಮಿ , ಕೃಷ್ಣಪ್ಪ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು