7:25 AM Sunday24 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ… ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ… ತೇಜಸ್ವಿ ಅವರು ನಡೆನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರು; ಡಾ.ಸಂಪತ್…

ಇತ್ತೀಚಿನ ಸುದ್ದಿ

ಎಡಿಟೆಡ್ ಫೋಟೋ: ಹುಬ್ಬಳ್ಳಿಯಲ್ಲಿ ಗಲಭೆ; ಕಲ್ಲು ತೂರಾಟ; ಗಾಳಿಯಲ್ಲಿ ಗುಂಡು; ನಿಷೇಧಾಜ್ಞೆ ಜಾರಿ

17/04/2022, 11:01

ಹುಬ್ಬಳ್ಳ(reporterkarnataka.com);ಪ್ರಾರ್ಥನಾ ಮಂದಿರದ ಎಡಿಟೆಡ್ ಚಿತ್ರವನ್ನು ಯುವಕನೊಬ್ಬ ಸ್ಟೇಟಸ್ ನಲ್ಲಿ ಹಾಕಿದಕ್ಕೆ ಸಂಬಂಧಿಸಿದಂತೆ ಹುಬ್ಬಳಿಯಲ್ಲಿ ಶನಿವಾರ ತಡರಾತ್ರಿ ಹಿಂಸಾಚಾರ ಭುಗಿಲೆದ್ದು, ಕಲ್ಲು ತೂರಾಟ ನಡೆಸಲಾಗಿದೆ. ಸಮೀಪದ ಆಸ್ಪತ್ರೆಯ ಮೇಲೂ ದಾಳಿ ನಡೆಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದು ವಿವಾದಕ್ಕೆ ಕಾರಣವಾದ ಪೋಸ್ಟ್‌ ಮಾಡಿದ್ದ ಆರೋಪದ ಮೇಲೆ ಅಭಿಷೇಕ್‌ ಹಿರೇಮಠ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಸಮೀಪದಲ್ಲಿಯೇ ಕಲ್ಲುತೂರಾಟ ನಡೆದಿದ್ದು, ಸಮೀಪದ ಆಸ್ಪತ್ರೆ ಮೇಲೂ ದಾಳಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಅಶ್ರುವಾಯು ಪ್ರಯೋಗಿಸಿದರು. ಘಟನೆಯಲ್ಲಿ ಪೊಲೀಸ್‌ ವಾಹನಗಳು ಜಖಂಗೊಂಡಿವೆ. ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣ ಕ್ರಮವಾಗಿ ನಿಷೇಧಾಜ್ಞೆ ವಿಧಿಸಲಾಗಿದೆ.

ಕಲ್ಲು ತೂರಾಟ: ವಿಡಿಯೊ ವೈರಲ್‌ ಆಗುತ್ತಿದ್ದಂತೆ ಆಕ್ರೋಶಗೊಂಡ ಒಂದು ಸಮುದಾಯ ಕಲ್ಲು ತೂರಾಟ ಮಾಡಿದರು. ಇದನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಉದ್ವಿಗ್ನ ಗುಂಪಿನವರು ಪೊಲೀಸ್‌ ವಾಹನಗಳ ಮೇಲೆ ಕಲ್ಲು ಎಸೆದಿದ್ದಾರೆ. ಕಾನ್‌ಸ್ಟೆಬಲ್ ಗುರುಪಾದಪ್ಪ ಸ್ವಾದಿ, ಪೂರ್ವ ಸಂಚಾರ ಇನ್‌ಸ್ಪೆಕ್ಟರ್ ಕಾಡದೇವರಮಠ ಗಾಯಗೊಂಡಿದ್ದಾರೆ. ಸಾರ್ವಜನಿಕರಿಗೂ ಗಾಯಗಳಾಗಿವೆ.

ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಅವರು ಸಮುದಾಯದ ಮುಖಂಡರ ಜೊತೆ ಸಮಾಲೋಚನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದರು. ಘಟನೆ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆ ನಡೆದ ಸುತ್ತಲಿನ ಪ್ರದೇಶದಲ್ಲಿದ್ದ ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಲಾಭೂರಾಮ್‌ ತಡರಾತ್ರಿವರೆಗೆ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದರು.

ನಿಯೋಜನೆ: ನಗರದ ಪ್ರಮುಖ ಧಾರ್ಮಿಕ ಸ್ಥಳಗಳ ಎದುರು ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭಾನುವಾರ ಹೊರ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

ಮುಂಜಾಗ್ರತಾ ಕ್ರಮವಾಗಿ ಭದ್ರಾವತಿಯ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ಕರೆಸಿಕೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಭಾನುವಾರ ರಜೆ ಮೇಲೆ ಹೋದ ಸಿಬ್ಬಂದಿಗೂ ಕರ್ತವ್ಯಕ್ಕೆ ಮರಳಲು ಸೂಚಿಸಿದ್ದಾರೆ.

ದೂರು: ‘ವಿವಾದಾತ್ಮಕ ಸ್ಟೇಟಸ್‌ ವೇಗವಾಗಿ ವೈರಲ್ ಆಗಿತ್ತು.ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದೇವೆ. ಆರೋಪಿಯನ್ನು ಸಹ ಬಂಧಿಸಿದ್ದಾರೆ. ಎಲ್ಲರಿಗೂ ತಿಳಿವಳಿಕೆ ನೀಡಿದ್ದೇವೆ. ಆದರೂ, ಸಮುದಾಯದವರು ಒಮ್ಮಿಂದೊಮ್ಮೆಲೆ ಬಂದು ಗುಂಪು ಸೇರಿ ಗಲಾಟೆ ಆಗಿದೆ. ನಿಯಂತ್ರಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ನನಗೂ ಪೆಟ್ಟು ಬಿದ್ದಿದೆ. ಯಾರೂ ಕಾನೂನು ಕೈಗೊಳ್ಳಬಾರದು. ಕಾನೂನಾತ್ಮಕವಾಗಿ ಪ್ರತಿಭಟನೆ ನಡೆಸಿ ನ್ಯಾಯ ಕೇಳೋಣ. ಹುಬ್ಬಳ್ಳಿ ಧಾರವಾಡ ಶಾಂತವಾಗಿದೆ. ಅದನ್ನು ಮುಂದುವರಿಸಿಕೊಂಡು ಹೋಗೋಣ’ ಎಂದು ಹುಬ್ಬಳ್ಳಿ ಅಂಜುಮನ್ ಸಂಸ್ಥೆ ಉಪಾಧ್ಯಕ್ಷ ಅಲ್ತಾಫ್ ಕಿತ್ತೂರು ಹೇಳಿದರು.

ಕಮಿಷನರ್‌ ಮನವಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ, ಕೆಲವರು ಜನರನ್ನು ಸೇರಿಸಿದ್ದು ಎಲ್ಲರೊಂದಿಗೂ ನಾವು ಚರ್ಚೆಗೆ ಮುಂದಾದೆವು. ಆದರೆ, ಜನರ ಗುಂಪು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಈ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ’ ಎಂದು ಕಮಿಷನರ್‌ ಲಾಭೂರಾಮ್‌ ಮಾಧ್ಯಮಗಳಿಗೆ ತಿಳಿಸಿದರು.

ಗಲಾಟೆಯ ಹಿಂದಿರುವ ವ್ಯಕ್ತಿಗಳ ಬಗ್ಗೆಯೂ ತನಿಖೆ ನಡೆಸಲಾಗುವುದು. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಶಾಂತಿ ಕಾಪಾಡಿಕೊಳ್ಳಲು ಒತ್ತು ಕೊಡಬೇಕು ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು