1:51 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಪತಿ ಬಲಿ: ರಾಯಚೂರಿನಲ್ಲಿ 6 ತಿಂಗಳ ಶಿಶುವನ್ನು ಕೊಂದು ಪತ್ನಿ ಆತ್ಮಹತ್ಯೆ 

17/04/2022, 13:16

ಮಂಗಳೂರು(reporterkarnataka.com):

ರಸ್ತೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಗೊಂಡ ಪತ್ನಿ ತನ್ನ 6 ತಿಂಗಳ ಹಸುಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.

ಮಂಗಳೂರಿನ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಾಧರ ಬಿ. ಕಮ್ಮಾರ(36) ಅವರು ಎ.ಜೆ. ಆಸ್ಪತ್ರೆ ಬಳಿಯ ಕುಂಟಿಕಾನದಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಬೆಂಗಳೂರಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಗಂಗಾಧರ ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪಘಾತದಲ್ಲಿ ಪತಿ ಮರಣ ಹೊಂದಿದ

ವಿಷಯ ತಿಳಿಯುತ್ತಲೇ ರಾಯಚೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಶೃತಿ (30) ಅವರು ರಾತ್ರಿ 10 ಗಂಟೆಗೆ ತನ್ನ 6 ತಿಂಗಳ ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಶ್ರುತಿ ಅವರು ತಮ್ಮನ ಮನೆಯಲ್ಲಿದ್ದರು. ಮನೆಯವರಿಗೆ ವಿಷಯ ತಿಳಿಯುವ ಮೊದಲೇ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದು ಆಘಾತ ಮೂಡಿಸಿದೆ. ಆಮೂಲಕ ಇಡೀ ಕುಟುಂಬ ಒಂದೇ ದಿನ ಸಾವಿಗೀಡಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು