7:23 AM Monday25 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಸಚಿವ ಮಾಧುಸ್ವಾಮಿ ಕಮಿಷನ್ ಕೇಳ್ತಾರಂತೆ!: ಬೊಮ್ಮಾಯಿ ಸಂಪುಟದ ಇನ್ನೊಂದು ವಿಕೆಟ್ ಉರುಳುತ್ತಾ?

17/04/2022, 14:33

ತುಮಕೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬಳಿಕ ಸಚಿವರುಗಳ ಕಮಿಷನ್ ವ್ಯವಹಾರ ಒಂದೊಂದಾಗಿ ಹೊರ ಬೀಳುತ್ತಿದೆ. ಈ ಬಾರಿ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಆರೋಪ ಕೇಳಿಬರುತ್ತಿದೆ.

ಸಂತೋಷ್ ಪಾಟೀಲ್ ಆರೋಪ ಮಾಡಿದಂತೆ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಇದೀಗ ಆರೋಪ ಮಾಡಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಅವರು ಮಾಧ್ಯಮಗಳ ಮುಂದೆ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ನೇರ ಆರೋಪ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಎಲ್ಲ 10 ಮಂದಿ ಶಾಸಕರುಗಳಿಗೂ ಕಮಿಷನ್ ಹೋಗುತ್ತೆ. ಯಾವುದೇ ಕಾಮಗಾರಿಗೆ ಟೆಂಡರ್ ಹಾಕುವ ಮುನ್ನ ಸಚಿವ ಮಾಧುಸ್ವಾಮಿ ಅವರನ್ನು ಭೇಟಿಯಾಗಲು ಅಧಿಕಾರಿಗಳು ಸೂಚಿಸುತ್ತಾರೆ. ತಾನು ಕಾನೂನು ಸಚಿವ ಯಾವುದೇ ಕಾಮಗಾರಿ ನಡೆಯಬೇಕಾದರೆ ತನ್ನ ಗಮನಕ್ಕೆ ತರಬೇಕೆಂದು ಸಚಿವರು ತಾಕೀತು ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಶಾಸಕರು ಒಂದು ಲೆಟರ್ ಕೊಡಬೇಕಾದರೂ ಕಮಿಷನ್ ಕೇಳ್ತಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು