7:48 PM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: 3 ಮಂದಿ ಸಾವು; 5 ಮಂದಿ ಗಂಭೀರ

18/04/2022, 08:52

ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ.

ಮೃತಪಟ್ಟವರನ್ನು ಪಶ್ಚಿಮ ಬಂಗಾಳದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಎಂದು ಗುರುತಿಸಲಾಗಿದೆ.

ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು.

ಎಸ್ ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ  ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು