ಇತ್ತೀಚಿನ ಸುದ್ದಿ
ಹುಬ್ಬಳ್ಳಿ: ವಿವಾದಾತ್ಮಕ ಸ್ಟೇಟಸ್ ಪ್ರಕರಣ; ಆರೋಪಿಗೆ ಏ.30ರ ತನಕ ನ್ಯಾಯಾಂಗ ಬಂಧನ
18/04/2022, 17:19
ಹುಬ್ಬಳ್ಳಿ (reporterkarnataka.com): ವಿವಾದಾತ್ಮಕ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಯನ್ನು ನಾಲ್ಕನೆಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವ ವಿವಾದಾತ್ಮಕ ಅನಿಮೆಟೆಡ್ ವಿಡಿಯೋವೊಂದನ್ನು ವಾಟ್ಸ್‌ಆ್ಯಪ್ ಸ್ಟೇಟಸ್ ಹಾಕಿಕೊಂಡು ಗಲಭೆಗೆ ಕಾರಣನಾಗಿದ್ದ ಎಂಬ ಆರೋಪ ಹಿನ್ನೆಲೆಯಲ್ಲಿ ಆರೋಪಿ ಅಭಿಷೇಕ ಹಿರೇಮಠ ಎಂಬಾತನನ್ನು ಬಂಧಿಸಲಾಗಿತ್ತು.
ಅಭಿಷೇಕ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ನಾಳೆ ಸರ್ಕಾರಿ ವಕೀಲರಿಂದ ತಕರಾರು ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿದು ಬಂದಿದೆ. ಅಭಿಷೇಕ ಹಿರೇಮಠ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ.