ಇತ್ತೀಚಿನ ಸುದ್ದಿ
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ, ಗೃಹ ಸಚಿವರ ವಿರುದ್ಧ ಅಶ್ಲೀಲ ಪದಬಳಕೆ: ಆರೋಪಿ ಬಂಧನ
20/04/2022, 09:36
ಹೊಸದಿಲ್ಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದ ಮತ್ತು ಕೆಟ್ಟದಾಗಿ ಅಪಹಾಸ್ಯ ಮಾಡಿದ್ದ ವ್ಯಕ್ತಿಯೊಬ್ಬನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಆದಿಲ್ ಅಲಿ(38) ಎಂದು ಗುರುತಿಸಲಾಗಿದೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಅವಹೇಳನ ಮಾಡಿದ್ದರಿಂದಲೇ ಬಂಧಿಸಿದ್ದಾಗಿ ಸ್ಥಳೀಯ ಎಸ್ಪಿ ಸಿದ್ಧಾರ್ಥ್ ಬಹುಗುಣ್ ತಿಳಿಸಿದ್ದಾರೆ.
ಆರೋಪಿಯು ಪ್ರಧಾನಿ ಮತ್ತು ಗೃಹ ಸಚಿವರನ್ನು ನಿಂದಿಸಿದ, ಅಪಹಾಸ್ಯ ಮಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ಪತ್ತೆ ಕಾರ್ಯ ಶುರು ಮಾಡಿದ್ದು, ಕೊನೆಗೂ ಬಂಧಿಸಿದ್ದಾರೆ.