2:32 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಪ್ರಾಪ್ತ ಬಾಲಕಿಯ ಹೊರಗೆ ಸುತ್ತಾಡಿಸಿದ ಆರೋಪ: ಬಂಧಿತ ಪಿಯು ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಸಮ್ಮತಿ

21/04/2022, 14:10

ಬೆಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹೆತ್ತವರ ಸಮ್ಮತಿ ಇಲ್ಲದೆ ಮನೆಯಿಂದ ಹೊರಗೆ ಕರೆದೊಯ್ದ ಆರೋಪದ ಮೇಲೆ ಬಂಧನಕ್ಕೊಳಗಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ರಾಜ್ಯ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಪ್ರಕರಣದ ಆರೋಪಿ ಬೆಂಗಳೂರು ನಿವಾಸಿಯಾಗಿದ್ದು, ದ್ವಿತೀಯ ಪಿಯು ವಿದ್ಯಾರ್ಥಿಗೆ ಇದೇ ಏಪ್ರಿಲ್ 22ರಿಂದ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆ ಬರೆಯಲು ಜಾಮೀನು ನೀಡಬೇಕು’ ಎಂದು ಕೋರಿ ಸಲ್ಲಿಸಿದ್ದ. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಪೀಠ ಆರೋಪಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ಆದೇಶಿಸಿದೆ.

ಆರೋಪಿಯು ಒಂದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಭದ್ರತೆ ಬಾಂಡ್‌ ನೀಡಬೇಕು. ಪರೀಕ್ಷೆ ಮುಗಿದ ನಂತರ ತಕ್ಷಣ ಮೇ 11ರ ಸಂಜೆ 6 ಗಂಟೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ವಯಂ ಶರಣಾಗಬೇಕು. ಪರೀಕ್ಷೆ ಬರೆಯಲು ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಬೇಕು. ಆರೋಪಿ ವಾಸ ಮಾಡುವ ವ್ಯಾಪ್ತಿ ಪ್ರದೇಶದ ಪೊಲೀಸ್‌ ಠಾಣೆಗೆ ತೆರಳಿ ಪ್ರತಿದಿನ ಸಂಜೆ 6 ಗಂಟೆಗೆ ಸಹಿ ಮಾಡಬೇಕು. ಸಾಕ್ಷಿ ನಾಶಕ್ಕೆ ಪ್ರಯತ್ನಿಸಬಾರದು. ಕೋರ್ಟ್ ಅನುಮತಿ ಇಲ್ಲದೆ ವ್ಯಾಪ್ತಿ ಪ್ರದೇಶ ಬಿಟ್ಟು ಹೊರಗೆ ಹೋಗಬಾರದು. ಒಂದೊಮ್ಮೆ ಆರೋಪಿ ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪ್ರಾಸಿಕ್ಯೂಷನ್‌ ಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಿದೆ.

ಈ ಕುರಿತು ಅಪ್ರಾಪ್ತ ವಯಸ್ಸಿನ 8ನೇ ತರಗತಿಯ ಬಾಲಕಿಯ ಅಕ್ಕ ದೂರು ನೀಡಿದ್ದಳು.

ಅಪ್ಪ–ಅಮ್ಮ ಮನೆಯಲ್ಲಿ ಇಲ್ಲದ ವೇಳೆ ನನ್ನ ತಂಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಆರೋಪಿಗಳು ಮನೆಯಿಂದ ಹೊರಗೆ ಕರೆದೊಯ್ದು ಸುತ್ತಾಡಿಸಿಕೊಂಡು ಬಂದಿದ್ದ. ಈ ವೇಳೆ ಮನೆಯೊಳಗೆ ಬಂದ ಅವರನ್ನು ಹೊರಹೋಗುವಂತೆ ಸೂಚಿಸಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಿದರು ಎಂದು ಸಂತ್ರಸ್ತೆಯ ಅಕ್ಕ ಏಪ್ರಿಲ್ 14ರಂದು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012ರ (ಪೊಕ್ಸೊ) ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 354, 354(ಡಿ), 323, 504 ಹಾಗೂ 34ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.tv

ಇತ್ತೀಚಿನ ಸುದ್ದಿ

ಜಾಹೀರಾತು