ಇತ್ತೀಚಿನ ಸುದ್ದಿ
All the Best: ಇಂದಿನಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ: ಕೋವಿಡ್ ಮಾರ್ಗಸೂಚಿ ಬಿಡುಗಡೆ
21/04/2022, 23:46
ಬೆಂಗಳೂರು(reporterkarnataka.com): ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಮಾರ್ಗಸೂಚಿ ಪಟ್ಟಿಯನ್ನು ಪಿಯು ಬೋರ್ಡ್ ಪ್ರಕಟಿಸಿದೆ.
ಪರೀಕ್ಷೆಗೆ ಹಾರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಕೊರೋನಾ ಲಸಿಕೆ ಪ್ರಮಾಣ ಪತ್ರವನ್ನು ಕಡ್ಡಾಯದಿಂದ ವಿನಾಯಿತಿ ನೀಡಲಾಗಿದೆ.
ಈ ಬಗ್ಗೆ ಪಿಯು ಬೋರ್ಡ್ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದು, ನಾಳೆಯಿಂದ ಆರಂಭವಾಗುತ್ತಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಪಡೆದಂತ ಪ್ರಮಾಣ ಪತ್ರವನ್ನು ಹಾಜರುಪಡಿಸೋದು ಕಡ್ಡಾಯ ನಿಯಮದಿಂದ ವಿನಾಯ್ತಿ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಸೂಚಿಸಿದ್ದಾರೆ.
ಕೊರೋನಾ ತಡೆಗಟ್ಟೋ ಸಂಬಂಧ ಸಾಮಾಜಿಕ ಅಂತರ, ಮಾಸ್ಕ್ ಧರಿಸೋದು ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆಯಿಂದ ವಿದ್ಯಾರ್ಥಿಗಳು, ಶಿಕ್ಷಕರನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆಯೂ ತಿಳಿಸಲಾಗಿದೆ.