6:46 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬೆಂಗಳೂರು: ಸೆಮಿಕಾನ್ ಇಂಡಿಯಾ 2022 ಸಮ್ಮೇಳನ; ಏ. 29ರಂದು ಪ್ರಧಾನಿ ಮೋದಿ ಉದ್ಘಾಟನೆ

22/04/2022, 14:49

ಬೆಂಗಳೂರು(reporterkarnataka.com): ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಆಶ್ರಯದಲ್ಲಿ ‘ಸೆಮಿಕಾನ್ ಇಂಡಿಯಾ 2022’ ಮೂರು ದಿನಗಳ ಸಮ್ಮೇಳನ ಬೆಂಗಳೂರಿನ ಐಟಿಸಿ ಗಾರ್ಡೇನಿಯಾದಲ್ಲಿ  ಏ. 29ರಿಂದ ಮೇ 1ರವರೆಗೆ ಆಯೋಜಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಂದು  ಬೆಳಗ್ಗೆ 11 ಗಂಟೆಗೆ ಸಮ್ಮೇಳನ ಉದ್ಘಾಟಿಸಲಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನದಲ್ಲಿ ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ, ಸೆಮಿಕಂಡಕ್ಟರ್ ವಿನ್ಯಾಸ, ಉತ್ಪಾದನೆ ಮತ್ತು ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿರುವಂತೆ ಮಾಡಲು ಯೋಜಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಜಾಗತಿಕ ಸೆಮಿಕಂಡಕ್ಟರ್ ಮೌಲ್ಯ ಸರಪಳಿಯಲ್ಲಿ ಭಾರತವನ್ನು ಮಹತ್ವದ ಪಾತ್ರದಾರಿಯನ್ನಾಗಿ ಮಾಡುವುದು ಪ್ರಧಾನಿ ಅವರ ದೃಷ್ಟಿಕೋನವಾಗಿದೆ. ಕಳೆದ 75 ವರ್ಷಗಳಲ್ಲಿ ಮೊದಲ ಬಾರಿಗೆ- ಈ ವಲಯದಲ್ಲಿ ಕ್ಷಿಪ್ರ ನಿರ್ಣಾಯಕ ಪ್ರಗತಿ ಮಾಡಲಾಗಿದೆ. ಸೆಮಿಕಾನ್ ಇಂಡಿಯಾ 2022 ಸಮ್ಮೇಳನವು ಸೆಮಿಕಂಡಕ್ಟರ್ ಉದ್ಯಮ, ಸಂಶೋಧನೆ ಮತ್ತು ಶಿಕ್ಷಣದಿಂದ ಪ್ರಪಂಚದಾದ್ಯಂತದ ಅತ್ಯುತ್ತಮ ಮನಸ್ಸುಗಳನ್ನು ಆಕರ್ಷಿಸುತ್ತದೆ ಮತ್ತು ಭಾರತವನ್ನು ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮತ್ತು ಸೆಮಿಕಂಡಕ್ಟರ್ ಉದ್ಯಮಕ್ಕೆ ಜಾಗತಿಕ ಕೇಂದ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ಅವರ ದೃಷ್ಟಿಕೋನವನ್ನು ಪೂರೈಸುವಲ್ಲಿ ದೊಡ್ಡ ಹೆಜ್ಜೆಯಾಗಿ ಕಾರ್ಯನಿರ್ವಹಿಸುತ್ತದೆ.

ಈ ಸಮ್ಮೇಳನದಲ್ಲಿ ಮೈಕ್ರಾನ್ ಸಿಇಒ ಸಂಜಯ್ ಮೆಹ್ರೋತ್ರಾ, ಕ್ಯಾಡೆನ್ಸ್ ಸಿಇಒ ಅನಿರುದ್ಧ ದೇವಗನ್, ಇಂಡೋ-ಅಮೆರಿಕ ವೆಂಚರ್ ಪಾಲುದಾರ ಸಂಸ್ಥಾಪಕ ವಿನೋದ್ ಧಾಮ್, ಸೆಮಿ ಅಧ್ಯಕ್ಷ ಅಜಿತ್‌ ಮನೋಚಾ, ಎಮೆರಿಟಸ್ ಸ್ಟಾನ್‌ಫೋರ್ಡ್ ಪ್ರೊ. ಆರೋಗ್ಯಸ್ವಾಮಿ ಪಾಲ್‌ರಾಜ್ ಮತ್ತಿತರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸೆಮಿಕಂಡಕ್ಟರ್ ವಲಯದಲ್ಲಿ ಪಾಲುದಾರಿಕೆ ಮತ್ತು ಮೈತ್ರಿಗಳನ್ನು ರೂಪಿಸುವ ಮೂರು ದಿನಗಳ ಸಮ್ಮೇಳನದಲ್ಲಿ ಸಹಿ ಮಾಡಲಿರುವ ಒಡಂಬಡಿಕೆಗಳ ಸಂಖ್ಯೆಯನ್ನು ಸಚಿವಾಲಯವು ಎದುರು ನೋಡುತ್ತಿದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು