1:39 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ವಕೀಲರ ಜತೆ ವಾಗ್ವಾದ: ದಿಲ್ಲಿ ಕೋರ್ಟ್‌ ಎದುರಲ್ಲೇ ಹಾರಿತು ಗುಂಡು; ತನಿಖೆ ಆರಂಭ

22/04/2022, 14:55

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿಯ ಕೋರ್ಟ್ ಎದುರಿನಲ್ಲೇ ಗುಂಡು ಹಾರಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ದೆಹಲಿಯ ರೋಹಿಣಿ ಕೋರ್ಟ್‌ ಎದುರುನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ 9.40 ರ ಸುಮಾರಿಗೆ ಘಟನೆ ನಡೆದಿದ್ದು ಗೇಟ್‌ ನಲ್ಲಿ ನಿಯೊಜನೆಗೊಂಡ ಭದ್ರತಾ ಸಿಬ್ಬಂದಿಯ ಆಯುಧದಿಂದ ಗುಂಡು ಹಾರಿದೆ ಎಂದು ವರದಿಗಳು ಹೇಳಿವೆ.

ಗೇಟ್‌ ಎದುರಲ್ಲಿ ಇಬ್ಬರು ವಕೀಲರು ಹಾಗೂ ಇನ್ನೊಬ್ಬ ವ್ಯಕ್ತಿಯ ನಡುವೆ ವಾಗ್ವಾದ ನಡೆದಿದ್ದು ಗೇಟ್‌ ನಲ್ಲಿ ನಿಯೋಜನೆಗೊಂಡಿದ್ದ ನಾಗಾಲ್ಯಾಂಡ್‌ ಸಶಸ್ತ್ರ ಪಡೆಯ ಭದ್ರತಾ ಸಿಬ್ಬಂದಿಯೊಬ್ಬ ಮಧ್ಯಪ್ರವೇಶ ಮಾಡಿದ್ದಾನೆ. ಈ ಸಂದರ್ಭದಲ್ಲಿ ಗುಂಡಿನ ಸದ್ದು ಭೋರ್ಗರೆದಿದೆ.

ಘಟನೆಯನ್ನು ದೆಹಲಿ ಪೋಲೀಸರು ಗಂಭಿರವಾಗಿ ಪರಿಗಣಿಸಿದ್ದು ತನಿಖೆ ಕೈಗೊಂಡಿದ್ದಾರೆ. ಗುಂಡು ಹಾರಲು ಕಾರಣವೇನೆಂಬುದನ್ನು ಪತ್ತೆ ಹಚ್ಚಲಾಗುತ್ತಿದ್ದು ಆಕಸ್ಮಿಕವಾಗಿ ಗುಂಡು ಹಾರಿದೆಯೇ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು