5:53 AM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಮೇ ಅಂತ್ಯದೊಳಗೆ ಜಲಸಿರಿ ಪೂರ್ಣಗೊಳಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಸುನಿಲ್ ಎಚ್ಚರಿಕೆ

22/04/2022, 20:01

ಮಂಗಳೂರು(reporterkarnataka.com): ಜಲ ಜೀವನ್ ಮಿಷನ್ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ 28 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಕುಡಿಯುವ ನೀರು ಪೂರೈಕೆಯ ಕಾಮಗಾರಿಗಳನ್ನು ಬರುವ ಮೇ ಅಂತ್ಯದೊಳಗೆ ಪೂರ್ಣಗೊಳಿಸಬೇಕು, ಇಲ್ಲದಿದ್ದರೆ ಸಂಬಂಧಿಸಿದ ಎಂಜಿನಿಯರ್‍ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್  ಎಚ್ಚರಿಕೆ ನೀಡಿದರು.

ಅವರು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಜೆಜೆಎಂ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು, ಅದೂ ಸರ್ಕಾರದ ನಿಯಮಗಳು ಹಾಗೂ ಮಾನದಂಡಗಳ ಆಧಾರದಲ್ಲಿಯೇ ಪೂರ್ಣಗೊಳಿಸಬೇಕು. ಅದನ್ನು ಹೊರತುಪಡಿಸಿ ಗುತ್ತಿಗೆದಾರರ ಅನುಕೂಲಕ್ಕೆ ತಕ್ಕಂತೆ ಅಲ್ಲ, ಮೇ 30ರೊಗಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ, ಸಂಬಂಧಿಸಿದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ತಾಕೀತು ಮಾಡಿದರು. 

ಪ್ರಗತಿ ಪರಿಶೀಲನೆ ವೇಳೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯಡಿ ಕೈಗೊಳ್ಳಲಾದ ಕಾಮಗಾರಿ ಹಾಗೂ ಯೋಜನೆಗಳ ಅನುಷ್ಠಾನದ ಬಗ್ಗೆ ಸಮರ್ಪಕ ಮಾಹಿತಿಯನ್ನು ಸಭೆಗೆ ನೀಡಬೇಕು. ಅವುಗಳ ಪ್ರಗತಿಯ ಬಗ್ಗೆ ಸ್ಥಳಕ್ಕೆ ತೆರಳಿ ಪರಿಶೀಲಿಸುವ ಸಂದರ್ಭದಲ್ಲಿ ವ್ಯತ್ಯಾಸ ಕಂಡುಬಂದಲ್ಲೀ ಸಂಬಂಧಿಸಿದ ಅಧಿಕಾರಿಗಳು ಸಮಸ್ಯೆಯಲ್ಲಿ ಸಿಲುಕಿಕೊಳ್ಳುತ್ತಾರೆ ಎಂದು ತಿಳಿಸಿದ ಸಚಿವರು, ಕಾಮಗಾರಿಗಳು ಹಾಗೂ ಯೋಜನೆಗಳ ಬಗ್ಗೆ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇರಲೇ ಬೇಕು ಎಂದರು.

ಕೆಲವೊಮ್ಮೆ ವಿವಿಧ ಸಂಘಟನೆಗಳು ಬಂದ್‍ಗೆ ಕರೆ ನೀಡುವ ಸಂದರ್ಭಗಳಲ್ಲಿ ಯಾವುದೇ ಕಾರಣಕ್ಕೂ ಸರ್ಕಾರಿ, ಅನುದಾನಿತ ಶಾಲೆಗಳನ್ನು ಮುಚ್ಚಬಾರದು, ಇತ್ತೀಚೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ರೀತಿಯ ಘಟನೆ ಸಂಭವಿಸಿದೆ, ಆ ವೇಳೆ ಶಾಲೆಗಳನ್ನು ಬಂದ್ ಮಾಡಿದವರಿಗೆ ಕೂಡಲೇ ನೋಟಿಸ್ ಜಾರಿ ಮಾಡುವಂತೆ ತಿಳಿಸಿದ ಸಚಿವರು, ನ್ಯಾಯಬೆಲೆ ಅಂಗಡಿಗಳು, ಮೆಡಿಕಲ್ ಶಾಪ್‍ಗಳು ಸೇರಿದಂತೆ ಸರ್ಕಾರಿ ಸಂಸ್ಥೆಗಳು ಅದಕ್ಕೆ ಮನ್ನಣೆ ನೀಡಬಾರದು, ಇಂತಹ ಸನ್ನಿವೇಶಗಳಲ್ಲಿ ತಹಶೀಲ್ದಾರರು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಎಚ್ಚರಿಕೆಯಿಂದ ಕ್ರಮಜರುಗಿಸಬೇಕು ಎಂದು ತಿಳಿಸಿದರು. 

ಉತ್ತರ ವಿಧಾನಸಭೆ ಕ್ಷೇತ್ರದದ ವ್ಯಾಪ್ತಿಯಲ್ಲಿ 94ಸಿಸಿ ಹಾಗೂ ಪಿಂಚಣಿ ಪ್ರಕರಣಗಳನ್ನು ಕೂಡಲೇ ಇತ್ಯರ್ಥಪಡಿಸಬೇಕು, ತಾಲೂಕಿನಲ್ಲಿ ಕೇವಲ 13 ಸ್ಯಾಮ್ ಮಕ್ಕಳಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ ಸಭೆಗೆ ನೀಡಿದ ಮಾಹಿತಿಯನ್ನು ಆಲಿಸಿದ ನಂತರ ಸ್ಯಾಮ್ ಮಕ್ಕಳ ಬಗ್ಗೆ ಸೂಕ್ತ ಅಂಕಿಅಂಶಗಳನ್ನು ಸಂಗ್ರಹಿಸುವಂತೆ, ತಾಲೂಕಿನಲ್ಲಿ ವಿದ್ಯುತ್ ರಹಿತ ಮನೆಗಳ ಪಟ್ಟಿಯನ್ನು ಸಂಗ್ರಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಲೋಕೋಪಯೋಗಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಗ್ರಾಮೀಣ ಕುಡಿಯುವ ನೀರು ಇಲಾಖೆವತಿಯಿಂದ ಕೈಗೊಂಡಿರುವ ಕಾಮಗಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳ್ಳಬೇಕು, ಮಳೆ ಬಂದರೆ ಕಾಮಗಾರಿಗಳನ್ನು ಕೈಗೊಳ್ಳುವುದು ಕಷ್ಟಸಾಧ್ಯವಾಗುತ್ತದೆ, ವಿದ್ಯಾಸಿರಿ ಯೋಜನೆಯಡಿ ಸಾಧ್ಯವಾದಷ್ಟು ಹೆಚ್ಚಿನ ವಿದ್ಯಾರ್ಥಿಗಳನ್ನು ನೋಂದಾಯಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಪಿಎಂ ಕಿಸಾನ್ ಯೋಜನೆಯಡಿ ಯೋಜನೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಲು ತಿಳಿಸಿದರು. 

ಸಭೆಗೆ ಹಾಜರಾಗದ ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರಿಗೆ ಸಚಿವರು ತಿಳಿಸಿದರು.

ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಸಹಾಯಕ ಆಯುಕ್ತ ಮದನ್ ಮೋಹನ್ ವೇದಿಕೆಯಲ್ಲಿದ್ದರು. 

ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನಾಗರಾಜ್, ತಹಶೀಲ್ದಾರ್ ಪುರಂದರ್ ಸೇರಿದಂತೆ ಸಂಬಂಧಿಸಿದ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು