12:18 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಮೃತ ಸ್ವಸಹಾಯ ಕಿರು ಉದ್ದಿಮೆಗಾಗಿ ಮಹಿಳೆಯರಿಗೆ 1.85 ಕೋಟಿ ಬಿಡುಗಡೆ

22/04/2022, 20:15

ಮಂಗಳೂರು(reporterkarnataka.com): ಅಮೃತ ಸ್ವ ಸಹಾಯ ಕಿರು ಉದ್ದಿಮೆ ಯೋಜನೆಯಡಿ ಜಿಲ್ಲೆಗೆ 1.85 ಕೋಟಿ ರೂ.ಗಳು ಬಿಡುಗಡೆಯಾಗಿದ್ದು, ಅದನ್ನು ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರು ತಮ್ಮ ಉದ್ದಿಮೆಗಳಿಗೆ ಮೂಲ ಬಂಡವಾಳವನ್ನಾಗಿ ಬಳಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಕರೆ ನೀಡಿದರು.

ಅವರು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಮೃತ ಸ್ವ ಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ವಸಹಾಯ ಸಂಘಗಳಿಗೆ ಚೆಕ್ ವಿತರಿಸಿ ಮಾತನಾಡಿದರು.

ಅಮೃತ ಸ್ವ ಸಹಾಯ ಕಿರು ಉದ್ದಿಮೆ ಯೋಜನೆಯಡಿ 185 ಸ್ವಸಹಾಯ ಗುಂಪುಗಳನ್ನು ಆಯ್ಕೆ ಮಾಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮೊದಲಾಗಿ ಚೆಕ್ ವಿತರಿಸುತ್ತಿದೆ. ಗುಂಪುಗಳು ತಾವು ಪಡೆದ ಬಂಡವಾಳವನ್ನು ಪರಿಣಾಮಕಾರಿಯಾಗಿ ಬಳಸಬೇಕು. ಉಭಯ ಜಿಲ್ಲೆಯಲ್ಲಿ ಮಹಿಳಾ ಜಾಗೃತಿ ದೊಡ್ಡ ಪ್ರಮಾಣದಲ್ಲಿ ಇದ್ದು, ಇದರಿಂದ ಸಮಾಜದಲ್ಲಿಯೂ ಜಾಗೃತಿ ಉಂಟಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಜಿಲ್ಲೆ ಯಶಸಿಯಾಗಿದೆ, ಮಹಿಳೆಯರನ್ನು ಮುಖ್ಯವಾಹಿನಿಗೆ ತರುವಲ್ಲಿ ಯೋಜನೆ ಹೆಚ್ಚು ಮಹತ್ವದ್ದಾಗಿದೆ. ನಗರ ಪ್ರದೇಶದ ಸ್ವಸಹಾಯ ಗುಂಪುಗಳಿಗೂ ಈ ಯೋಜನೆ ಅನ್ವಯಿಸಬೇಕಿದೆ ಎಂದರು.

ಪ್ರಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಜಿಲ್ಲೆಯ 185 ಸ್ವ ಸಹಾಯ ಗುಂಪುಗಳಿಗೆ ತಲಾ ಒಂದು ಲಕ್ಷ ರೂ.ಗಳಂತೆ 1.85 ಕೋಟಿ ರೂ. ಬೀಜಧನ (ಕ್ಯಾಪಿಟಲ್ ಫಂಡ್) ವಿತರಿಸಲಾಗಿದೆ. ಹಾಳೆ ತಟ್ಟೆ ತಯಾರಿಕೆ, ಅಣಬೆ ಕೃಷಿ, ಬೇಕರಿ ತಿಂಡಿ ತಯಾರಿ, ಸೋಪ್ ಆಯಿಲ್, ಫಿನಾಯಿಲ್ ತಯಾರಿಕೆ ಮೊದಲಾದ ಚಟುವಟಿಕೆಗಳನ್ನು ಈ ಗುಂಪುಗಳು ಕೈಗೊಂಡಿದ್ದು, ಅವುಗಳಿಗೆ ಉತ್ತೇಜನ ನೀಡಲು ಈ ಸಹಾಯಧನ ವಿತರಿಸಲಾಗಿದೆ. ಇದನ್ನು ಮರುಪಾವತಿ ಮಾಡಬೇಕಾಗಿಲ್ಲ. ಯಾವ ಉದ್ದೇಶಕ್ಕೆ ಪ್ರಸ್ತಾವನೆ ಸಲ್ಲಿಸಿ ಪಡೆಯಲಾಗಿದೆಯೋ ಅದಕ್ಕೆ ಬಳಸಬೇಕು. ಜಿಲ್ಲೆಯಲ್ಲಿ 65 ಉತ್ಪನ್ನಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಮುಖ್ಯಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ಸಹಾಯಕ ಆಯುಕ್ತ ಮದನ್ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಾಪಾ ಭೋವಿ ಉಪಸ್ಥಿತರಿದ್ದರು.


ಸಹಾಯಕ ಯೋಜನಾಧಿಕಾರಿ ಸರೋಜಿನಿ ವಂದಿಸಿದರು. ನೂರಾರು ಸಂಖ್ಯೆಯ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು