6:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯದ 19 ಜಿಲ್ಲೆಗಳು ಇಂದಿನಿಂದ ಅನ್ ಲಾಕ್ : ಗಾರ್ಮೆಂಟ್ಸ್,  ಬೀದಿಬದಿ ವ್ಯಾಪಾರ, ಕಾರ್ಖಾನೆಗಳಿಗೆ ಅವಕಾಶ

14/06/2021, 08:06

ಬೆಂಗಳೂರು(reporterkarnataka news): ರಾಜ್ಯದ 19 ಜಿಲ್ಲೆಗಳು ಇಂದಿನಿಂದ (ಸೋಮವಾರ) ಅನ್​ಲಾಕ್ ಆಗಲಿದ್ದು, ಗಾರ್ಮೆಂಟ್ಸ್, ಬೀದಿ ಬದಿ ವ್ಯಾಪಾರ ಮತ್ತು ಕಾರ್ಖಾನೆಗಳು ತೆರೆಯಲು ಸರಕಾರ ಅವಕಾಶ ಕಲ್ಪಿಸಲಿದೆ.

ಮಧ್ಯಾಹ್ನದವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ವ್ಯಾಪಾರ ಸ್ಥಳದಲ್ಲಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಕಡ್ಡಾಯದೊಂದಿಗೆ ಅವಕಾಶ ನೀಡಲಾಗಿದೆ.

ಅನ್ ಲಾಕ್ ಆದ ಜಿಲ್ಲೆಗಳ ನಗರದ ಪ್ರದೇಶದಲ್ಲಿ ವಾಹನಗಳ ಓಡಾಟ ಹೆಚ್ಚಾಗಲಿದೆ. ಕೊರೊನಾ ಆತಂಕ ಎದುರಿಸುತ್ತಿರುವ ಈ ಹೊತ್ತಿನಲ್ಲಿ ಇದೊಂದು ದೊಡ್ಡ ಸವಾಲಾಗಲಿದೆ.

ಸಾರ್ವಜನಿಕ ಸಾರಿಗೆ ಲಭ್ಯವಿರುವುದಿಲ್ಲ. ಖಾಸಗಿ ವಾಹನಗಳ ಬಳಕೆಗೆ ಅವಕಾಶವಿದೆ.

ಸ್ವಂತ ವಾಹನಗಳು, ಕ್ಯಾಬ್, ಆಟೋಗಳ ಸಂಚಾರ ನಡೆಸಲಿದೆ. ಆದರೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ರಾತ್ರಿ ವೇಳೆ ಅನಗತ್ಯ ಓಡಾಡುವ ವಾಹನಗಳ ತಪಾಸಣೆಯ ಜವಾಬ್ದಾರಿಯೂ ಪೊಲೀಸರ ಮೇಲಿದೆ

ವೀಕೆಂಡ್ ಕರ್ಪ್ಯೂ ಕೂಡ ಇರುತ್ತದೆ. ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೆ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಇರಲಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು