4:43 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆ; ಮತ್ತೆ ಮಾಸ್ಕ್ ಗೆ ಮೊರೆ

23/04/2022, 21:55

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ತಲೆ ಎತ್ತುವ ಮುನ್ಸೂಚನೆಗಳಿವೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. 

ರಾಜಧಾನಿಯಲ್ಲಿ ಬಿಎ.10, ಬಿಎ.2, 12 ಹೊಸ ವೈರಸ್‌ ಪತ್ತೆಯಾಗಿದೆ ಎಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಎ.10, ಬಿಎ.2, 12 ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. ಇನ್ನೀದು ದೆಹಲಿ, ಮುಂಬೈನಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಭಾರತದಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆರಂಭವಾಗಿದೆ. ಇನ್ನು ಕರ್ನಾಟಕದಲ್ಲಿ 3-4 ವಾರಗಳಲ್ಲಿ 4ನೇ ಅಲೆ ಬರುವ ಸಾಧ್ಯತೆಯಿದೆ’ ಎಂದರು.

 ‘ಕೊರೊನಾ 4ನೇ ಅಲೆ 3ನೇ ಅಲೆಯ ಗುಣಲಕ್ಷಣಗಳನ್ನ ಹೊಂದಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇರುತ್ತದೆ. ರಾಜ್ಯದಲ್ಲಿ ಈಗಾಗಲೇ ಎಲ್ಲ ಚಟುವಟಿಕೆಗಳು ಆರಂಭವಾಗಿದೆ. ಇನ್ನೆರೆಡು ವಾರದಲ್ಲಿ ಕೊರೊನಾ ಕೇಸ್‌ ಸಂಖ್ಯೆಯೂ ಹೆಚ್ಚಾಗಲಿದೆ. ಶ್ವಾಸಕೋಶ, ಹೃದ್ರೋಗ, ಕ್ಯಾನ್ಸರ್‌ನಿಂದ ಬಳಲುವವರು ಹುಷಾರಾಗಿರಿ. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇನ್ನು ಜ್ವರ, ಕೆಮ್ಮು ಇದ್ದರೆ ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ. ಕೊರೊನಾ ಲಸಿಕೆ ಪಡೆದಿದ್ದೇವೆಂದು ನಿರ್ಲಕ್ಷ್ಯ ಮಾಡುವುದು ಬೇಡ’ ಎಂದರು.

ಇನ್ನು ‘ಆಸ್ಪತ್ರೆಗೆ ದಾಖಲಾಗುವವರಿಗೆ ಕೊವಿಡ್‌ ಟೆಸ್ಟ್‌ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್‌ ಟೆಸ್ಟಿಂಗ್‌ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಇದರಿಂದ ರೂಪಾಂತರಿ ವೈರಸ್‌ ಹರಡುವುದನ್ನು ತಡೆಯಬಹುದು’ ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು