1:18 AM Monday25 - August 2025
ಬ್ರೇಕಿಂಗ್ ನ್ಯೂಸ್
Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

23/04/2022, 22:03

ಬೆಂಗಳೂರು( reporterkarnataka.com) : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 24 ರವರೆಗೆ ಮತ್ತು ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಏಪ್ರಿಲ್ 24 ರವರೆಗೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು