1:59 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 3 ವರ್ಷ ಕಳೆದರೂ ಸಿಗದ ಪರಿಹಾರ; ದಯಾ ಮರಣಕ್ಕೆ ರಾಷ್ಟ್ರಪತಿಗೆ ಪತ್ರ ಬರೆದ 5 ಕುಟುಂಬ

26/04/2022, 09:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಮನೆಯಲ್ಲಿ 2019ರಲ್ಲಿ ಉಂಟಾದ ಪ್ರವಾಹದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ

5 ಮನೆಗಳಿಗೆ ಇದುವರೆಗೆ ಪರಿಹಾರ ದೊರಕದಿರುವ ಹಿನ್ನೆಲೆಯಲ್ಲಿ ಈ 5 ಕುಟುಂಬಗಳು ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸುವದು.

ಮನೆ ಸಂಪೂರ್ಣ ಕೊಚ್ಚಿ ಹೋಗಿದ್ದಲ್ಲದೆ,ಬದುಕಿಗೆ ಆಧಾರವಾಗಿದ್ದ ತೋಟ-ಗದ್ದೆಗಳು ನಾಶವಾಗಿದ್ದವು. ಅಂದಿನ ಮುಖ್ಯಮಂತ್ರಿ

ಯಡಿಯೂರಪ್ಪ ಅವರು ಗ್ರಾಮಕ್ಕೆ ಆಗಮಿಸಿ ಪರಿಹಾರದ ಭರವಸೆ ನೀಡಿದ್ದರು.

ಖುದ್ದು ಮಲೆಮನೆ ಗ್ರಾಮಕ್ಕೆ ಆಗಮಿಸಿ ಪರ್ಯಾಯ ಬದುಕು ಕಟ್ಟಿಕೊಡುವ ಮಾತು ಕೊಟ್ಟಿದ್ದರು.

ಆ ಬಳಿಕ ಸಂಬಂಧಪಟ್ಟ ಜನಪ್ರತಿನಿಧಿಗಳು-ಅಧಿಕಾರಿಗಳ ಕಚೇರಿಗಳಿಗೆ ಅಲೆದು ಅಲೆದು ಸಂತ್ರಸ್ತರು ಸುಸ್ತಾಗಿದ್ದಾರೆ.

ಸತತ ಮೂರು ವರ್ಷ ಹೋರಾಟ ಮಾಡಿದ್ರೂ ಪರಿಹಾರ ಸಿಗಲಿಲ್ಲ. ಇದೀಗ ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಸಂತ್ರಸ್ತರು ಮನವಿ ಮಾಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು