1:35 AM Thursday16 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸಿಎಂ ಬೊಮ್ಮಾಯಿ ನಾಳೆ ಮಂಗಳೂರಿಗೆ: ಕಡಲನಗರಿಯಿಂದ ಪಿಎಂ ಜತೆ ಕೋವಿಡ್ ಸಂವಾದ

26/04/2022, 20:34

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ.27ರಂದು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

27ರ ಬೆಳಗ್ಗೆ 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಬೆಳಿಗ್ಗೆ 11.50ಕ್ಕೆ ಜಿಲ್ಲಾ ಪಂಚಾಯತ್‍ಗೆ ಆಗಮಿಸುವರು. ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್‍ನಲ್ಲಿ ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3 ಗಂಟೆಗೆ ಮೂಡಬಿದಿರೆಗೆ ತೆರಳಿ ಅಲ್ಲಿನ ಎಕ್ಸಲೆಂಟ್ ಪಿ.ಯು. ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡವನ್ನು ಉದ್ಘಾಟಿಸುವರು. 3.30ಕ್ಕೆ  ಜೈನ ಬಸದಿಗೆ ಭೇಟಿ ನೀಡುವರು. 

ಸಂಜೆ 3.50ಕ್ಕೆ ಮೂಡಬಿದಿರೆಯ ಪ್ರೆಸ್‍ಕ್ಲಬ್ ಆವರಣದಲ್ಲಿ ನೂತನ ಕಟ್ಟಡಕ್ಕೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವರು.

ಸಂಜೆ 4 ಗಂಟೆಯಿಂದ 5.30ರ ವರೆಗೆ ಮೂಡಬಿದಿರೆಯ ಆಡಳಿತ ಸೌಧದ ಮುಂಭಾಗದಲ್ಲಿ ಮುಲ್ಕಿ- ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಜೆ 5.40ಕ್ಕೆ ಮೂಡಬಿದಿರೆಯಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ, ಬಜಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 6.50ಕ್ಕೆ ವಿಮಾನದ ಮೂಲಕ ಹೊರಟು, ರಾತ್ರಿ 7.45ಕ್ಕೆ ಬೆಂಗಳೂರು ತಲುಪಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು