ಇತ್ತೀಚಿನ ಸುದ್ದಿ
ಯಾರೂ ಕನ್‌ಫ್ಯೂಸ್ ಆಗಬೇಡಿ, ಮುಖ್ಯಮಂತ್ರಿ ಹೊರಡಿಸಿದ ಹೊಸ ಮಾರ್ಗಸೂಚಿಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
07/05/2021, 21:20
ಬೆಂಗಳೂರು (Reporter Karnataka News) ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಲಾಕ್ಡೌನ್.
* ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆವರೆಗೆ ಮಾತ್ರ ಹಾಲು, ದಿನಸಿ ಅಂಗಡಿಗಳನ್ನು ತೆರೆಯಲು ಅನುಮತಿ.
*ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗುವಂತಿಲ್ಲ.
*ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ತಳ್ಳುವ ಗಾಡಿಯಲ್ಲಿ ತರಕಾರಿ-ಹಣ್ಣುಗಳನ್ನು ಮಾರಲು ಅವಕಾಶ ನೀಡಲಾಗಿದೆ.
*ಕೈಗಾರಿಕೆ ಹೊಟೇಲ್, ಪಬ್, ಬಾರ್ ಕ್ಲೋಸ್.ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿಸಲಾಗುವುದು.
*ಸರ್ಕಾರಿ ಕಚೇರಿ ಭಾಗಶಃ ಕೆಲಸ ಮಾಡಲಿದೆ.
*ಅಗತ್ಯವಸ್ತು ಸಾಗಿಸುವ ವಾಹನಗಳಿಗೆ ಅವಕಾಶವಿದೆ.
*ಅಂತರ್ ಜಿಲ್ಲಾ ಸಂಚಾರಕ್ಕೆ ಸಂಪೂರ್ಣ ನಿಷೇಧ
*ಮೇ 10 ರಿಂದ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳಿಗೆ ಬೀಗ
*ವಿಮಾನ ರೈಲು ಸಂಚಾರಕ್ಕೆ ಅನುಮತಿ
*ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆಗೆ ಮದ್ಯ ಮಾರಾಟಕ್ಕೆ ಅವಕಾಶ
*ಟ್ಯಾಕ್ಸಿ, ಅಟೋ ತುರ್ತು ಸೇವೆಗಳಿಗೆ ಅವಕಾಶ
*ಸಿನಿಮಾ, ಮಾಲ್, ಜಿಮ್ ಎಲ್ಲವೂ ಮೇ 24 ರವರೆಗೂ ಬಂದ್
*ತುರ್ತು ವೈದ್ಯಕೀಯ ಸೇವೆ ಹೊರತು ಪಡಿಸಿ ಎಲ್ಲಾ ರೀತಿಯ ಸಂಚಾರಕ್ಕೆ ನಿರ್ಬಂಧವೇರಲಾಗಿದೆ.
*ಎಲ್ಲ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು.
*ತಳ್ಳುಗಾಡಿಗಳಲ್ಲಿ ತರಕಾರಿ ಮಾರಲು ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಅವಕಾಶ
*ಎಲ್ಲ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
*ಕ್ರೀಡಾ ಸಮುಚ್ಛಯ, ಸಾರ್ವಜನಿಕ ಈಜುಕೊಳ ಸಂಪೂರ್ಣ ಬಂದ್
*ಈಗಾಗಲೇ ನಿಗದಿಯಾಗಿದ್ದ ಮದುವೆಗಳಿಗೆ ಅವಕಾಶ
ಮದುವೆ ಸಮಾರಂಭಗಳಿಗೆ 50 ಜನರಿಗೆ ಮಾತ್ರ ಅವಕಾಶ
*ರಸ್ತೆ ಕಾಮಗಾರಿಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.
*ಆಸ್ಪತ್ರೆಗಳು, ಮೆಡಿಕಲ್ ಶಾಪ್ಗಳು, ಬ್ಯಾಂಕ್ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
ಯಾವುದೇ ಪಾಸ್ ವ್ಯವಸ್ಥೆಯನ್ನು ಜಾರಿಗೆ ತರುವುದಿಲ್ಲ.
*ಕೈಗಾರಿಕೆಗಳಿಗೆ ಷರತ್ತು ಬದ್ಧ ಅನುಮತಿ
*ಇ- ಕಾಮರ್ಸ್ ಸೇವೆಗಳಿಗೆ ಅವಕಾಶ
*ಹೊಟೇಲ್ ಗಳಿಂದ ಪಾರ್ಸೆಲ್ ತರಲು ಹೋಗಬೇಕಾದರೆ ನಡೆದುಕೊಂಡೆ ಹೋಗಬೇಕು. ವಾಹನಗಳಲ್ಲಿ ಹೋದರೆ ಶಿಕ್ಷೆ
*ಅಗತ್ಯ ಸೇವೆಗಳಿಗೆ ಬಿಟ್ಟು ಅನವಶ್ಯಕವಾಗಿ ವಾಹನಗಳನ್ನು ಚಲಾಯಿಸುವಂತಿಲ್ಲ.
*ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗುವುದು.
*ನ್ಯಾಯಬೆಲೆ ಅಂಗಡಿಗಳು ತೆರೆಯಲಿವೆ. ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10ರ ವರೆಗೆ ತೆರೆಯಲಿವೆ.
*ಜನರು ಮನೆಯಿಂದ ಹೊರ ಬರುವುದನ್ನು ತಡೆಯುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಒದಗಿಸುವುದನ್ನು ಉತ್ತೇಜಿಸಲಾಗುವುದು.
ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು ಲಭ್ಯವಾಗಲಿವೆ.
*ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ.
*ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿ, ಧಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳನ್ನು ನಿಷೇಧಿಸಲಾಗಿದೆ.