4:47 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಅಚಲವಾದ ಶ್ರದ್ದೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಮಹಾಲಿಂಗೇಶ್ವರ ದೇವರ ವರ್ಧಂತ್ಯುತ್ಸವದಲ್ಲಿ ಶ್ರೀ ಸಚ್ಚಿದಾನಂದ ಸರಸ್ವತಿ

28/04/2022, 20:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಋಷಿಮುನಿಗಳ ಮಾತಿನಲ್ಲಿ, ಗುರುಗಳ ಉಪದೇಶದಲ್ಲಿ ಅಚಲವಾದ ಶ್ರದ್ದೆ ಇದ್ದವರಿಗೆ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಹರಿಹರಪುರದ ಶ್ರೀ ಆದಿಶಂಕರಾಚಾರ್ಯ ಶ್ರೀ ಶಾರದಾಲಕ್ಷ್ಮಿನರಸಿಂಹ ಪೀಠಾಧೀಶ್ವರರಾದ

ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು ಹೇಳಿದರು.

ಮರ್ಕಲ್‍ನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ದೇವರ ವರ್ಧಂತ್ಯುತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು.

ಅಚಲವಾದ ಶ್ರದ್ದೆಯೇ ದೇವರ ಅನುಗ್ರಹಕ್ಕೆ ಮೊದಲ ಸೂತ್ರವಾಗಿದೆ. ದೇವರು ಎಲ್ಲಾ ಮಾನವರಲ್ಲಿ ಕೂಡ ಸಮಾನವಾಗಿ ಆತ್ಮರೂಪದಲ್ಲಿ ನೆಲೆಸಿದ್ದಾನೆ. ಎಲ್ಲಾ ಮಾನವರಲ್ಲಿ ದೇವರನ್ನು ನೋಡಬೇಕಿದೆ. ಇಂತಹ ಪವಿತ್ರ ದೃಷ್ಟಿಯಿಂದ ಸಹಮಾನವರನ್ನು ನೋಡುವ ದೃಷ್ಟಿ ಬೆಳೆಸಿಕೊಂಡಾಗ ಅವರು ಹೆಚ್ಚಿ ಇವರು ಕಡಿಮೆ ಎನ್ನುವ ತುಚ್ಚವಾದ ಭಾವನೆ ಮನಸ್ಸಿನಲ್ಲಿ ಬರುವುದಿಲ್ಲ. ಬಡವ ಶ್ರೀಮಂತ, ವಿದ್ಯಾವಂತ, ಅಧಿಕಾರವಂತ ಎಲ್ಲಾ ಭೇಧವನ್ನು ಬಿಟ್ಟು ಎಲ್ಲರನ್ನು ಸಮಾನವಾಗಿ ನೋಡಲು ಸಾಧ್ಯವಾಗುತ್ತದೆ ಎಂದರು.

ವರ್ಧಂತ್ಯುತ್ಸವದ ಪ್ರಯುಕ್ತ ಕಲಾ ಹೋಮ, ಶ್ರೀ ರುದ್ರ ಹೋಮ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳು ವಿಜೃಂಭಣೆಯಿಂದ ನಡೆದವು.

 ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಮರ್ಕಲ್, ಕಾರ್ಯದರ್ಶಿ ವಿಜೇಂದ್ರ ಮರ್ಕಲ್, ಖಜಾಂಚಿ ಲೋಕೇಶ್, ಉಪಾಧ್ಯಕ್ಷರಾದ ಗಜೇಂದ್ರ, ಸುಬ್ಬರಾಯ, ಅರುಣ, ಹಾಲಪ್ಪ, ವೀರಪ್ಪ, ರಮೇಶ್, ಮುಖಂಡರಾದ ರಾಮದಾಸಗೌಡ, ಗ್ರಾಮಸ್ಥರಾದ ಶಶಿಕುಮಾರ್, ದೀಪಕ್, ಯೋಗೇಶ್, ಅಶ್ವತ್ ಮರ್ಕಲ್ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು