2:34 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಹತ್ಯೆ ; ಕೊಲೆಗೆ ಕಾರಣವಾದ ಹಳೆ ದ್ವೇಷ ?

28/04/2022, 20:46

ಮಂಗಳೂರು (ReporterKarnataka.Com):ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಯುವಕನೊಬ್ಬನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ತಂಡ ಮೈದಾನದ ಬಳಿ ಬರ್ಬರವಾಗಿ ಕೊಂದು ಹಾಕಿದೆ ಎನ್ನಲಾಗಿದೆ.

ಎಮ್ಮೆಕೆರೆ ತಂಡದ ಮಹೇಂದ್ರ ಮತ್ತಿತರ ನಾಲ್ಕು ಮಂದಿ ಯುವಕರು ಸೇರಿ ಕೊಂದು ಹಾಕಿದ್ದಾರೆ. ಹಳೆ ದ್ವೇಷದಲ್ಲಿ ಹಗೆ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಕ್ಕೆ ರಾಹುಲ್ ಹೊಯ್ದೆಬಜಾರ್ ನಿವಾಸಿಯಾಗಿದ್ದು ಅಲ್ಲಿನ ರೌಡಿ ತಂಡದಲ್ಲಿ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ಇದೇ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯರೊಬ್ಬರ ಮನೆಯಲ್ಲಿ ಜಗಳ ಮಾಡಿ ಮಹೇಂದ್ರ ಮತ್ತಿತರರ ಮೇಲೆ ಹಲ್ಲೆ ನಡೆಸಿದ್ದ. ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯಲ್ಲಿ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು