10:42 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2022 : ಮಂಗಳೂರು ವಿವಿಗೆ ವೇಟ್‌ಲಿಫ್ಟಿಂಗ್‌ನಲ್ಲಿ ದಾಖಲೆಯ ಚಿನ್ನ

28/04/2022, 21:27

ಬೆಂಗಳೂರು(reporterkarnataka.com): ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನಲ್ಲಿ ಗೇಟ್‌ ಲೈಫ್ ಟಿಂಗ್ ಮಂಗಳೂರು ವಿಶ್ವವಿದ್ಯಾನಿಲಯದ ಯ್ಯಾನ್‌ ಮಾರಿಯಾ ನೂತನ ರಾಷ್ಟ್ರೀಯ ದಾಖಲೆಯೊಂದಿಗೆ ರಾಜ್ಯಕ್ಕೆ ಗೌರವ ತಂದಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಿರುವ ಯ್ಯಾನ್‌ ಮಾರಿಯಾ ಎಂ.ಟಿ. ವನಿತೆಯರ +87 ಕೆಜಿ ವೇಟ್‌ಲಿಫ್ಟಿಂಗ್‌ ವಿಭಾಗದಲ್ಲಿ ರಾಷ್ಟ್ರೀಯ ದಾಖಲೆ ಬರೆದು ಚಿನ್ನದ ಸಾಧನೆ ಮಾಡಿದ್ದಾರೆ.

+87ಕೆಜಿ ವಿಭಾಗದ ಕ್ಲೀನ್‌ ಮತ್ತು ಜೆರ್ಕ್‌ ನಲ್ಲಿ 129 ಕೆಜಿ ಭಾರವೆತ್ತುವ ಮೂಲಕ ಮಾರಿಯಾ ನೂತನ ರಾಷ್ಟ್ರೀಯ ದಾಖಲೆ ಬರೆದರು.

ಹಿಂದೆ ಪಂಜಾಬ್‌ನ ಮನ್‌ಪ್ರೀತ್‌ ಕೌರ್‌ ಅವರು 128 ಕೆಜಿ ಭಾರವೆತ್ತಿ ನೂತನ ದಾಖಲೆ ಬರೆದಿದ್ದರು.

ಸ್ನ್ಯಾಚ್‌ನಲ್ಲಿ 101 ಕೆಜಿ ಮತ್ತು ಕ್ಲೀನ್‌ ಮತ್ತು ಜೆರ್ಕ್‌ನಲ್ಲಿ 129 ಕೆಜಿ ಸೇರಿ ಒಟ್ಟು 230 ಕೆಜಿ ಭಾರವೆತ್ತಿ ಮಾರಿಯಾ ಸ್ವರ್ಣ ಗೆದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು