10:37 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ನ ತೀರ್ಮಾನ ಏನು?: ರಾಜ್ಯ ಸಂಪುಟ ಪುನಾರಚನೆಯೇ? ಮುಖ್ಯಮಂತ್ರಿ ಬದಲಾವಣೆಯೇ?

30/04/2022, 18:25

ಬೆಂಗಳೂರು(reporterkarnataka.com): ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರಾಜ್ಯ ಬೊಮ್ಮಾಯಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗುತ್ತಿತ್ತು. ಆದರೆ ಆಪರೇಶನ್ ಕಮಲದ ಮೂಲಕ ಅಸ್ತಿತ್ವಕ್ಕೆ ಬಂದ ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಪುಟ ವಿಸ್ತರಣೆಗೆ ಕೈ ಹಾಕುವುದೆಂದರೆ ಜೇನುಗೂಡಿಗೆ ಕೈ ಹಾಕಿದ್ದಂತೇ ಸರಿ. ಇದೆಲ್ಲವನ್ನು ಅರಿತೇ ಸಂಪುಟ ಪುನಾರಚನೆಯ ಬಗ್ಗೆ ಪಕ್ಷದ ಹೈಕಮಾಂಡ್ ಇದುವರೆಗೆ ತೀರ್ಮಾನ ಕೈಗೊಂಡಿಲ್ಲ.

ಯುಗಾದಿ ಬೆನ್ನಲ್ಲೇ ರಾಜ್ಯ ಸಂಪುಟ ಪುನಾರಚನೆ ಎನ್ನಲಾಗಿತ್ತು. ಇದೀಗ ಏಪ್ರಿಲ್ ತಿಂಗಳ 1ನೇ, 2ನೇ, 3ನೇ ವಾರ ಕಳೆದು 4ನೇ ವಾರವೂ ಮುಗಿದು ಹೋಯಿತು. ಆದರೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲೇ ಇಲ್ಲ. ರಾಜ್ಯ ಸಂಪುಟದಲ್ಲಿ ಇದೀಗ 5 ಸ್ಥಾನಗಳು ಖಾಲಿ ಇವೆ. ಇನ್ನು 4 ಮಂದಿಯನ್ನು ಕೈಬಿಟ್ಟರೆ 9 ಮಂದಿಯನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಸಾಧ್ಯವಿದೆ. ಆದರೆ ಮೂಲ ಬಿಜೆಪಿಗರು ಹಾಗೂ ವಲಸೆ ಬಿಜೆಪಿಗರ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸ್ವಲ್ಪ ಎಡವಿದರೂ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಡ್ಯಾಮೇಜ್ ಆಗಲಿದೆ. ಇದನ್ನೆಲ್ಲ ಮನಗಂಡೇ ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಹಿಂದೇಟು ಹಾಕುತ್ತಿದೆ.

ಪಕ್ಷದ ಇನ್ನೊಂದು ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯೊಲ್ಲ. ಬದಲಿಗೆ ಮುಖ್ಯಮಂತ್ರಿಯ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಚಿಂತಿಸುತ್ತಿದೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೋಲಿಸಿದರೆ ಬೊಮ್ಮಾಯಿ ಅವರ ಪ್ರಭಾವ ಏನೂ ಸಾಲದು ಎನ್ನುವ ತೀರ್ಮಾನಕ್ಕೆ ಕೇಸರಿ ವರಿಷ್ಠರು ಬಂದಿದ್ದಾರೆ ಎನ್ನಲಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿ, ಮುಖ್ಯಮಂತ್ರಿ ಸ್ಥಾನವನ್ನು ಒಕ್ಕಲಿಗರಿಗೆ ಕೊಡುವ ಕುರಿತು ಕೂಡ ಚಿಂತನೆ ನಡೆದಿದೆ ಎನ್ನಲಾಗಿದೆ. ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪ್ರಭಾವೀ ಒಕ್ಕಲಿಗ ನಾಯಕನಿಗೆ ಪಟ್ಟ ಕಟ್ಟುವ ಬಗ್ಗೆ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು