4:51 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

Breaking News : ಮರವೂರು ಸೇತುವೆಯಲ್ಲಿ ಅಪಾಯಕಾರಿ ಬಿರುಕು : ನೀರು ಪಾಲಾಗಲಿದೆಯೆ ಮತ್ತೊಂದು ಮುಖ್ಯ ಸೇತುವೆ !

15/06/2021, 07:46

ಮಂಗಳೂರು(ReporterKarnataka.com)

ಮಂಗಳೂರಿನ ಕಾವೂರು ಬಳಿಯ ಮುಖ್ಯ ಸೇತುವೆ ಬಿರುಕು ಬಿಟ್ಟಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ಮರವೂರಿನ ಫಲ್ಗುಣಿ ನದಿಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದನ್ನು ತಿಳಿದ ಕಾವೂರು ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆ ಹಾಕಿದ್ದು ಹೆಚ್ಚಿನ ಅಪಾಯವಾಗುವುದನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ.

ಸೋಮವಾರ ರಾತ್ರಿಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಬ್ಯಾರಿಕೇಡ್ ಹಾಕಿ, ರಸ್ತೆಯನ್ನು ಬಂದ್ ಮಾಡಲು ಸೂಚಿಸಿದ್ದು ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯ ಸಂಪರ್ಕ ಕಡಿತಗೊಂಡಿದೆ.

ಬಜ್ಪೆ ಏರ್ಪೋರ್ಟ್‌ಗೆ ತೆರಳುವ ವಾಹನಗಳನ್ನು ಕಾವೂರಿನಲ್ಲಿ ಡೈವರ್ಟ್ ಮಾಡಲಾಗುತ್ತಿದೆ.

ಕಾವೂರು ಕಡೆಯಿಂದ ಕಟೀಲು, ಬಜ್ಜೆಗೆ ತೆರಳುವ ವಾಹನಗಳಿಗೂ ಸಂಚಾರಕ್ಕೆ ಅವಕಾಶ ಇಲ್ಲ. ಮಂಗಳೂರು ನಗರ ಭಾಗದಿಂದ ಬಜ್ಜೆಗೆ ತೆರಳಬೇಕಿದ್ದರೆ ಇನ್ನು ಗುರುಪುರ ಸೇತುವೆಯ ಮೂಲಕ ಸುತ್ತು ಬಳಸಿ ತೆರಳಬೇಕಾಗಿದೆ. ಮಂಗಳೂರು ಗ್ರಾಮೀಣ ಭಾಗದಿಂದ ನಗರಕ್ಕೆ ಪ್ರಮುಖ ಕೊಂಡಿಯಾಗಿದ್ದ ಸೇತುವೆ ಇಂದು ಕುಸಿಯುವ ಭೀತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು