8:01 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ವೃದ್ಧರ ಜಮೀನು ಲಪಟಾಯಿಸಲು ಯತ್ನ: ಮಹಿಳೆ ಸೇರಿದಂತೆ ಇಬ್ಬರ ಬಂಧನ; ಇನ್ನೊರ್ವ ಆರೋಪಿಗಾಗಿ ಶೋಧ

06/05/2022, 23:33

ಮಂಗಳೂರು(reporterkarnataka.com): ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಿರಿಯ ನಾಗರಿಕರೊಬ್ಬರಿಗೆ ಸೇರಿದ ಜಮೀನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಕ್ರೈಂ ಪೊಲೀಸರು ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅಶೋಕ ಕುಮಾರ್(47) ಹಾಗೂ ರೇಷ್ಮಾ ವಾಸುದೇವ್ ನಾಯಕ್( 36) ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಸೆನ್  ಕ್ರೈಂ ಪೊಲೀಸ್ ಠಾಣಾ ಮೊ.ನಂ.45/2022 ಕಲಂ: 406, 409, 417, 420, 465, 468, 471, 120(ಬಿ) ಜೊತೆಗೆ 34 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿರ್ಯಾದಿದಾರರ ಸಹಿಯನ್ನು ನಕಲಿಯಾಗಿ ಬಳಸಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ನಕಲಿ ದಾಖಲೆಪತ್ರಗಳಲ್ಲದೆ ಸಹಿಯನ್ನೂ ನಕಲುಗೊಳಿಸಿ ವೃದ್ಧರೊಬ್ಬರಿಗೆ ಸೇರಿದ ಜಮೀನನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವ ಮಂಗಳೂರು ನಗರ ಸೆನ್ ಪೊಲೀಸರು ಶುಕ್ರವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮೂಲತಃ ಬೆಂಗಳೂರಿನ ನಿವಾಸಿಯಾದ ಪ್ರಸ್ತುತ ಬಜ್ಪೆ ಸಮೀಪದ ಕೊಂಪದವಿನಲ್ಲಿ ವಾಸವಾಗಿರುವ ಕ್ರಿಸ್ಟಿನ್ ಎಡ್ವಿನ್ ಜೋಸೆಫ್ ಗೊನ್ಸಾಲ್ವಿಸ್ (84) ಎಂಬವರಿಗೆ ಸೇರಿದ ಜಮೀನನ್ನು ಖರೀದಿಸುವ ನೆಪದಲ್ಲಿ ಕಬಳಿಸಿದ ಆರೋಪದ ಮೇರೆಗೆ ಉಡುಪಿಯ ಅಶೋಕ್ ಕುಮಾರ್ ಮತ್ತು ರೇಷ್ಮಾ ವಾಸುದೇವ ನಾಯಕ್‌ರನ್ನು ಮಂಗಳೂರು ಸೆನ್ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ರಾಮ ಪೂಜಾರಿಯ ಬಂಧನ ಇನ್ನಷ್ಟೆ ಆಗಬೇಕಿದೆ. ಮೂವರ ವಿರುದ್ಧ ನಕಲಿ ದಾಖಲೆ ಮತ್ತು ನಕಲಿ ಸಹಿ ಮಾಡಿ ವಂಚಿಸಿದ ಬಗ್ಗೆ ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು