3:07 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರ್ಪಡೆ: ಇದೀಗ ಚೆಂಡು ಬಿಜೆಪಿ ರಾಜ್ಯ ನಾಯಕರ ಅಂಗಳಕ್ಕೆ

07/05/2022, 13:50

ಉಡುಪಿ(reporterkarnataka.com):  ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರ್ಪಡೆ ಕುರಿತು ರಾಜ್ಯ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಜಿಲ್ಲಾ ಘಟಕದ ಅಭಿಪ್ರಾಯವನ್ನು ರಾಜ್ಯ ನಾಯಕರಿಗೆ ತಿಳಿಸಲಾಗಿದೆ. ಕಾರ್ಯಕರ್ತ ರೊಂದಿಗೆ ಸಮಾಲೋಚಿಸಿ ನಾವು ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದು ನುಡಿದರು.

ರಾಜ್ಯ ನಾಯಕರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಮ್ಮ ಸಂಪೂರ್ಣ ಬೆಂಬಲವಿದೆ. ಪ್ರಮೋದ್ ಅವರನ್ನು ಪಕ್ಷಕ್ಕೆ ಸೇರಿಸಬೇಕೇ ಅಥವಾ ಬೇಡವೇ ಎಂಬ ಅಂತಿಮ ತೀರ್ಮಾನವನ್ನು ರಾಜ್ಯ ನಾಯಕರು ಕೈಗೊಳ್ಳುವರು ಎಂದು ಸುರೇಶ್ ನಾಯಕ್ ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಿಲ್ಲಾಧ್ಯಕ್ಷರು, ಕಾರ್ಕಳ ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಪಕ್ಷಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ನುಡಿದರು.

ಬಿಜೆಪಿ ತತ್ವ, ಸಿದ್ಧಾಂತವನ್ನು ಒಪ್ಪಿ ಬರುವ ಯಾರನ್ನೇ ಆದರೂ ಪಕ್ಷ ಸ್ವಾಗತಿಸುತ್ತದೆ. ಅದು ಪ್ರಮೋದ್ ಮಧ್ವರಾಜ್ ಇರಬಹುದು ಅಥವಾ ಇನ್ಯಾರೇ ಆಗಿರಬಹುದು ಎಂದರು.

ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು,ಬಿಜೆಪಿ ಎಂದೂ ಕಾಂಗ್ರೆಸ್ ಆಗಲು ಸಾಧ್ಯವಿಲ್ಲ. ಬಿಜೆಪಿ ಗಟ್ಟಿಯಾದ ಸಿದ್ದಾಂತವನ್ನು ಹೊಂದಿದೆ. ಈ ಸಿದ್ಧಾಂತದ ಚೌಕಟ್ಟನ್ನು ಮೀರಿ ಯಾವ ನಾಯಕರೂ ಬೆಳೆಯಲು ಸಾಧ್ಯವಿಲ್ಲ. ನಮ್ಮ ಪಕ್ಷ ಎಂದೂ ವ್ಯಕ್ತಿ, ಕುಟುಂಬ ಆಧಾರಿತ ಪಕ್ಷವಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು