9:07 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸೃಜನಾತ್ಮಕತೆ ಸಂಭ್ರಮಿಸಲು ಜಿ20 ಪ್ರೆಸಿಡೆನ್ಸಿಗೆ ಲೋಗೋ ಡಿಸೈನ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ:  ಪ್ರಧಾನಿ ಮೋದಿ ಕರೆ

07/05/2022, 23:15

ಹೊಸದಿಲ್ಲಿ(reporterkarnataka.com): ಭಾರತ ನಡೆಯಲಿರುವ ಜಿ20 ಪ್ರೆಸಿಡೆನ್ಸಿಗೆ ಸಂಬಂಧಿಸಿದಂತೆ ಲೋಗೋ ಡಿಸೈನ್ ಸ್ಪರ್ಧೆಯಲ್ಲಿ ದೇಶವಾಸಿಗಳು ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಪ್ರಧಾನಿ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನಮ್ಮ ಯುವ ಸಮುದಾಯದ ಸೃಜನಾತ್ಮಕತೆಯನ್ನು ಸಂಭ್ರಮಿಸಲು ಇದೊಂದು ವಿಶೇಷ ಸ್ಪರ್ಧೆಯಾಗಿದ್ದು, ಇದರಲ್ಲಿ ಎಲ್ಲರೂ ಸ್ಪರ್ಧೆ ಮಾಡುವುದು ಒಳ್ಳೆಯದು ಎಂದು ತಿಳಿಸಿದೆ.

1 ಡಿಸೆಂಬರ್ 2022 ರಿಂದ 30 ನವೆಂಬರ್ 2023 ರವರೆಗೆ ಭಾರತ ಜಿ20 ಪ್ರೆಸಿಡೆನ್ಸಿಯನ್ನು ಆಯೋಜಿಸುತ್ತಿದೆ. 2023 ರಲ್ಲಿ ಜಿ20 ಶೃಂಗಸಭೆಯನ್ನು ಸಹ ಆಯೋಜಿಸುತ್ತಿದೆ. ಅಂತಾರಾಷ್ಟ್ರೀಯ ಆರ್ಥಿಕ ಸಹಕಾರಕ್ಕೆ ಜಿ20 ಒಂದು ಪ್ರಮುಖ ವೇದಿಕೆಯಾಗಿದೆ. ಇದು ಜಾಗತಿಕ ಆರ್ಥಿಕ ಆಡಳಿತದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ.

ಈ ಹಿಂದೆ ಕೂಡ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಜಿ20 ಪ್ರೆಸಿಡೆನ್ಸಿಯನ್ನು ಅನನ್ಯವಾಗಿ ಪ್ರತಿನಿಧಿಸುವ ಕಲ್ಪನೆಗಳುಳ್ಳ ಲೋಗೋ ವಿನ್ಯಾಸ ಸ್ಪರ್ಧೆಯನ್ನು ಆರಂಭಿಸುತ್ತಿರುವುದಾಗಿ ಘೋಷಣೆ ಮಾಡಿತ್ತು.

ಈ ಬಗ್ಗೆ ಟ್ವೀಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಆರಿಂದಮ್ ಬಾಗ್ಚಿ ಅವರು, ಮುಂಬರುವ ಜಿ20 ಪ್ರೆಸಿಡೆನ್ಸಿಗಾಗಿ ಲೋಗೋ ಡಿಸೈನ್ ಸ್ಪರ್ಧೆಯನ್ನು ಆರಂಭಿಸುವುದನ್ನು ಘೋಷಿಸಲು ಸಂತೋಷವಾಗುತ್ತಿದೆ. ಅನನ್ಯವಾದ ರೀತಿಯಲ್ಲಿ ಈ ಜಿ20 ಯನ್ನು ಪ್ರತಿನಿಧಿಸುವ ನಿಮ್ಮ ಕಲ್ಪನೆಯನ್ನು 07 ಜೂನ್ 2022 ರೊಳಗೆ ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು