1:51 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಡಿಕೇರಿ: ಹುಲಿಯ ಉಗುರು ಅಕ್ರಮ ಮಾರಾಟ ಯತ್ನ; ಗುಂಡ್ಲುಪೇಟೆಯ ಇಬ್ಬರ ಬಂಧನ

08/05/2022, 08:28

ಮಡಿಕೇರಿ(reporterkarnataka.com): ಹುಲಿಯ 4 ಉಗುರುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.

ಗುಂಡ್ಲುಪೇಟೆ ಮೂಲದ ಕುಮಾರ ಮತ್ತು ವಿನು ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.

ಮಡಿಕೇರಿ-ಮೈಸೂರು ರಾಜ್ಯ ಹೆದ್ದಾರಿಯ ಚೈನ್‍ಗೇಟ್ ಬಳಿಯಲ್ಲಿರುವ ಬಸ್ ನಿಲ್ದಾಣದ ಎಡ ಬದಿಯಲ್ಲಿ ಇಬ್ಬರು ಹುಲಿಯ 4 ಉಗುರುಗಳನ್ನು ಅಕ್ರಮವಾಗಿ ಇಟ್ಟುಕೊಂಡು ಅದನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮೇ 6ರಂದು ಮಡಿಕೇರಿ ತಾಲೂಕು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಈ ಸಂದರ್ಭ ಸಿಬ್ಬಂದಿಗಳು ದಾಳಿ ನಡೆಸಿ ಎರಡು ಮಂದಿ ಆರೋಪಿಗಳನ್ನು ಮಾಲು ಸಹಿತ ಬಂಧಿಸಿದ್ದಾರೆ.

ಆರೋಪಿಗಳ ವಶದಲ್ಲಿದ್ದ 4 ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ. ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಮತ್ತು ಮಂಜುನಾಥ್ ಅವರುಗಳು ಕಾರ್ಯಾಚರಣೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು