5:23 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಅಶೋಕ ಶಿಲಾಶಾಸನ: ಇಲ್ಲಿಗಾಗಮಿಸಿದ ಪ್ರವಾಸಿಗರಿಗೆ ಸಿಗದು ಗುಟುಕು ಹನಿ ನೀರು!!

08/05/2022, 19:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣಕ್ಕೆ ಇತಿಹಾಸದಲ್ಲಿ ಹೆಸರಿದೆ. ಚುನಾವಣೆ ಸಂದರ್ಭದಲ್ಲಿ ಮಸ್ಕಿ ಹೆಸರು ದೆಹಲಿವರೆಗೆ ಮುಟ್ಟಿದೆ. ಪ್ರವಾಸೋದ್ಯಮ ಸಚಿವರೇ ಮಸ್ಕಿ ಪಟ್ಟಣಕ್ಕೆ ಭೇಟಿ ನೀಡಿದ ಮೂಲಭೂತ ಸೌಕರ್ಯದ ಆಶ್ವಾಸನೆ ನೀಡಿದ್ದರು. ಹಾಗೆ ಭೂಮಿ ಪೂಜೆ ನಡೆಸಿದ್ದರು. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮಸ್ಕಿಯ ಅಶೋಕ ಶಿಲಾಶಾಸನ ಅಭಿವೃದ್ಧಿ ಕಾಣದೆ ಹಾಗೇ ಉಳಿದು ಬಿಟ್ಟಿದೆ.

ಅಶೋಕ ಶಿಲಾಶಾಸನ ನೋಡಲು ದೇಶ- ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಇಲ್ಲಿ ಯಾತ್ರಿಕರಿಗೆ ಕುಡಿಯುವ ಶುದ್ಧವಾದ ಒಂದು ಗುಟುಕು ನೀರು ಕೂಡ ಸಿಗುವುದಿಲ್ಲ.

ಇಲ್ಲಿ ವಿಶ್ರಾಂತಿ ಪಡೆಯಲು ಉದ್ಯಾನವೇ ಇಲ್ಲ. ಹೈಟೆಕ್ ಶೌಚಾಲಯ ಇಲ್ಲ. ಸಚಿವರು- ಶಾಸಕರು ಅನೇಕರು ಬಂದು ಭೂಮಿಪೂಜೆ ಮಾಡಿ 
ಹೋದರೂ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.


ಮಸ್ಕಿ ಶಾಸಕರು ಪ್ರವಾಸೋದ್ಯಮ ಸಚಿವರು, ಮುಖ್ಯಮಂತ್ರಿಗಳಿಗೆ ಗಮನಕ್ಕೆ ತಂದು ಹೈಟೆಕ್ ಉದ್ಯಾನವನ ನಿರ್ಮಿಸಿ  ಶುದ್ಧವಾದ ಕುಡಿಯುವ ನೀರು ಹೈ ಟೆಕ್ ಶೌಚಾಲಯ,ಯಾತ್ರಿಕರಿಗೆ ಯಾತ್ರಿ ನಿವಾಸ್ 
ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಪುರಸಭೆ ಅಧಿಕಾರಿಗಳು ಯಾವುದೇ ಅನುದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಿಲ್ಲ. ಸರಕಾರ ಸಾವಿರಾರು ಕೋಟಿ ಅನುದಾನ ಬರುತ್ತದೆ. ಆದರೆ ಇತಿಹಾಸ ಇತಿಹಾಸ ಇತಿಹಾಸ ಪುಟದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಅಭಿವೃದ್ಧಿ ಮಾತ್ರ ಕಂಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು