1:58 AM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಸಂಭ್ರಮದ ಮಹರ್ಷಿ ಭಗೀರಥ ಜಯಂತೋತ್ಸವ

08/05/2022, 20:27

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ

info.reporterkarnataka@gmail.com

ಮಹರ್ಷಿ ಭಗೀರಥ ರವರ ಮನುಕುಲದ ಕಥೆ ಇಂದಿಗೂ ಇತಿಹಾಸದಲ್ಲಿ ಮತ್ತೆ ಮತ್ತೆ ನೆನಪಿನಲ್ಲಿ ಉಳಿಯುತ್ತದೆ. ಮನುಕುಲದ ಮಾನವತಾವಾದಿಯಾಗಿ ಮನೆಮಾತಾಗಿರುವ ಭಗೀರಥ ರನ್ನು ನೆನಪಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಸುರೇಶ್ ಗೌಡ ಹೇಳಿದರು.

ಅವರಿಂದು ನಾಗಮಂಗಲ ಮಿನಿವಿಧಾನ ಸೌಧದಲ್ಲಿ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಮಹರ್ಷಿ ಭಗೀರಥ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಅವರು ಉದ್ಘಾಟಿಸಿದರು.

ಭಗೀರಥ ಮಹರ್ಷಿಗಳು ಭೂಮಿಗೆ ಗಂಗೆಯನ್ನು ತರಲು ಮಾಡಿದ ಪ್ರಯತ್ನ ಅಡೆತಡೆಗಳನ್ನು ನಿಭಾಯಿಸಲು ಮಾಡಿದ ಶ್ರಮವನ್ನು ಸ್ಮರಿಸಿದರು.

ಅಂದು ಭಗೀರಥ ನೀರು ತರಲು ಮಾಡಿದ ಶ್ರಮ ಇಂದೂ ಸಹ ನಾವು ನೀರಿಗಾಗಿ ಹೋರಾಡುತ್ತಿದ್ದೇವೆ ಎಂದರು.

ಸಮಾಜದ ಸಮುದಾಯದ ಬಂಧುಗಳು ಸರ್ಕಾರದ ಸೌಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಉಪ್ಪಾರ ಸಮಾಜದ ಹಾಗೂ ಸಂಘಟನೆಗಳ ಮುಖಂಡರು ಬಾಗವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಉಪ್ಪಾರ ಸಮಾಜದ ಸಾಧಕರಿಗೆ ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು