10:50 AM Thursday28 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ‌ ಖಡಕ್ ವಾರ್ನಿಂಗ್

08/05/2022, 23:36

ಬೆಂಗಳೂರು(reporterkarnataka.com): ಜಿಲ್ಲಾಧಿಕಾರಿಗಳೇ ಸದಾ ಗಡಿಯಾರದತ್ತಲೇ ಗಮನವಿಡಬೇಡಿ, ಮನಸ್ಸಿಟ್ಟು‌ ಕೆಲಸ ಮಾಡಿ._ ಮಕ್ಕಿ ಕಾ ಮಕ್ಕಿಯಂತೆ ಇರಬೇಡಿ. ಇಂತಹ ಧೋರಣೆಯಿಂದ ಯಾವುದೇ ಪ್ರಯೋಜನವಾಗದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಖಡಕ್ ಆಗಿ ಹೇಳಿದ್ದಾರೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ಕರೆದಿದ್ದ ಡಿಸಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಐದು ವರ್ಷಗಳ ಅವಧಿಯ ಚುನಾಯಿತ ಸರ್ಕಾರದ ಕೊನೆಯ ವರ್ಷವಿದು. ಜಿಲ್ಲಾ ಹಂತದಲ್ಲಿ ಡಿಸಿ, ಸಿಇಒಗಳು ಸರಿಯಾದ ರೀತಿಯಲ್ಲಿ ಕೆಲಸ ಮಾಡಿದರೆ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯಗಳು ರೂಪುಗೊಳ್ಳುತ್ತವೆ._ ಅದಕ್ಕಿಂತಲೂ ಮುಖ್ಯವಾಗಿ ದೀನ-ದಲಿತರು, ಜನಸಾಮಾನ್ಯರ ಅಹವಾಲಿಗೆ ಸ್ಪಂದನೆ, ಜನಪರ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಿಸಬೇಕು ಎಂದು ತಾಕೀತು ಮಾಡಿದರು.

ಗ್ರಾಮ ಒನ್ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ‌ . ಸಕಾಲ ಯೋಜನೆ ಬಗ್ಗೆ ಉದಾಸೀನತೆ ಎದ್ದು‌ಕಾಣುತ್ತಿದೆ. ಕೆಳ ಹಂತದ ಅಧಿಕಾರಿಗಳು ನೋಡಿಲ್ಲ, ಮಾಡಿಲ್ಲ ಎಂಬ ಸಬೂಬು ಕೇಳುವುದಿಲ್ಲ. ಸಮಯದ ಪರಿವೆಯಿಲ್ಲದೆ ಕೆಲಸ ಮಾಡಿ, ನಿಮಗಾಗದಿದ್ದರೆ ನಿಮ್ಮ ಜಾಗಕ್ಕೆ ಮತ್ತೊಬ್ಬರು ಬರುತ್ತಾರೆ ಹುಷಾರ್ ಎಂದು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು