4:44 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

‘ಸಂಚಾರಿ’ ಗೆ ಕೊನೆಯ ಸಲಾಂ: ಮಿಂಚಿ ಮರೆಯಾದ  ಅದ್ಬುತ ನಟ ವಿಜಯ್ ಹುಟ್ಟೂರು ಪಂಚಮಹಳ್ಳಿಯಲ್ಲಿ ಲೀನ

15/06/2021, 16:02

ಶ್ರದ್ಧಾ ಎಸ್. ಪಾಟೀಲ್ ಹುಳಿಮಾವು

info.reporterkarnataka@gmail.com

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಮಹಾನ್ ಕನಸುಗಾರ ಸಂಚಾರಿ ವಿಜಯ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪಂಚಮಹಳ್ಳಿಯಲ್ಲಿ ಮಂಗಳವಾರ ಸಕಲ ಗೌರವದೊಂದಿಗೆ ನಡೆಯಿತು.

ವಿಜಯ್ ಅವರ ಪ್ರಾಣ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ವೀರಶೈವ ಲಿಂಗಾಯಿತ ಸಂಪ್ರದಾಯದ ಪ್ರಕಾರ ವಿಜಯ ಅವರ ಸಮಾಧಿ ಮಾಡಲಾಯಿತು. ಈ ಸಂದರ್ಭದಲ್ಲಿ ವಿಜಯ್ ಅವರ ಕುಟುಂಬ, ಬಂಧು ಮಿತ್ರರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತು. ನೆರೆದವರ ಕಣ್ಣಾಲಿಗಳು ಕೂಡ ತೇವಗೊಂಡಿತು.

ಮಾಜಿ ಶಾಸಕ ವೈ.ಎಸ್. ವಿ.ದತ್ತಾ ಎಲ್ಲ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಚಿತ್ರ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ ಮುಂತಾದವರು ಉಪಸ್ಥಿತರಿದ್ದರು.


ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದ ಪಾರ್ಥಿವ ಶರೀರವನ್ನು ನಂತರ ಅಂಬುಲೆನ್ಸ್ ಮೂಲಕ ಪಂಚಮಹಳ್ಳಿಗೆ ಕೊಂಡೊಯ್ಯಲಾಯಿತು.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಸಂಚಾರಿ ವಿಜಯ್ ತೀವ್ರವಾಗಿ ಗಾಯಗೊಂಡಿದ್ದರು. ತಲೆಗೆ ಬಿದ್ದ ಬಲವಾದ ಏಟಿನಿಂದ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿತ್ತು.ತಕ್ಷಣ ಅವರಿಗೆ ಅಪೊಲೋ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಶಸ್ತ್ರ ಚಿಕಿತ್ಸೆ ನಡೆದು 10 ತಾಸು ಕಳೆದರೂ ವಿಜಯ್ ಚಿಕಿತ್ಸೆಗೆ ಸ್ಪಂದಿಸಿಲ್ಲ. ನಂತರ ವೈದ್ಯರು ಬ್ರೈನ್ ಡೆಡ್ ಅಂತ ಘೋಷಿಸಿದರು. ಈ ನಡುವೆ ವಿಜಯ್ ಅವರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು. ಸಾವಿನಲ್ಲೂ ವಿಜಯ್ ಸಾರ್ಥಕತೆ ಕಂಡರು. ಜೀವ ಸಾರ್ಥಕ್ ಫೌಂಡೇಶನ್ ಮೂಲಕ ಅವರ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು.

ಸಂಚಾರಿ ವಿಜಯ್ ಅವರು ‘ರಂಗಪ್ಪ ಹೋಗಿಬಿಟ್ನಾ’ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ‘ನಾನು ಅವನಲ್ಲ ಅವಳು’ ಚಿತ್ರದ ಮೂಲಕ ಪ್ರಸಿದ್ಧರಾಗಿದ್ದರು. ಸುಮಾರು 24 ಸಿನಿಮಾಗಳಲ್ಲಿ ಅವರು ನಟಿಸಿದ್ದರು. ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಇವತ್ತು ಅವರ ‘ತಲೆದಂಡ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ವಿಜಯ್ ಅವರು ಬುದ್ದಿಮಾಂದ್ಯನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು