6:25 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಡಿಕೇರಿ: ಸಂಬಂಧಿಕರ ಮನೆಗೆ ಬಂದ 7ನೇ ತರಗತಿ ವಿದ್ಯಾರ್ಥಿ ನೀರುಪಾಲು

09/05/2022, 09:12

ಮಡಿಕೇರಿ(reporterkarnataka.com):
ಈದುಲ್ ಫಿತ್ರ್ ಹಬ್ಬದ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕನೋರ್ವ ನೀರು ಪಾಲಾದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ.

ನಾಸಿರ್ ಪಾಷ ಹಾಗೂ ಪಝೀಯಾ ಭಾನು ಅವರ ಪುತ್ರ ಫರ್ಹಾನ್ (12) ಮೃತಪಟ್ಟ ಬಾಲಕ. 7ನೇ ತರಗತಿಯಲ್ಲಿ ಕಲಿಯುತ್ತಿದ್ದ  ಫರ್ಹಾನ್, ರಂಝಾನ್ ಹಬ್ಬದ ಹಿನ್ನೆಲೆಯಲ್ಲಿ ಬೈಲ್ ಕೊಪ್ಪದಿಂದ ಶನಿವಾರಸಂತೆಯಲ್ಲಿರುವ  ಅಜ್ಜ, ಅಜ್ಜಿಯ ಮನೆಗೆ ಬಂದಿದ್ದ.

ಶನಿವಾರಸಂತೆಯಲ್ಲಿ  ಕಲ್ಲಂಗಡಿ ವ್ಯಾಪಾರ ಮಾಡುತ್ತಿದ್ದ ಮಾವನ ಅಂಗಡಿಯಲ್ಲಿ ಸಂಜೆಯವರೆಗೆ ಇದ್ದ ಪರ್ಹಾನ್, ಸಂಜೆ  5 ಗಂಟೆ ಸುಮಾರಿಗೆ ಮಾವನ ಮಗನೊಂದಿಗೆ ಶನಿವಾರಸಂತೆಯ ಹೆಮ್ಮನೆಯಲ್ಲಿರುವ  ಹೊಳೆಯಲ್ಲಿ ಈಜಲು ತೆರಳಿದ್ದಾನೆ.ಹೊಳೆಯ ಬದಿಯ ಕಲ್ಲಿನಲ್ಲಿ ಪಾಚಿ ಕಟ್ಟಿದ್ದರಿಂದ ಕಾಲು ಜಾರಿ ಫರ್ಹಾನ್ ನೀರಿಗೆ ಬಿದ್ದಿದ್ದಾನೆ. ಎಷ್ಟೇ ಹೊತ್ತಾದರೂ ನೀರಿನಿಂದ ಮೇಲೆ ಬಾರದ ಹಿನ್ನೆಲೆಯಲ್ಲಿ ಮಾವನ ಮಗ ಸ್ಥಳೀಯರಿಗೆ ವಿಷಯ ತಿಳಿಸಿದ್ದಾನೆ. ರಾತ್ರಿ ಪೂರ್ತಿ ಹುಡುಕಾಟ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು