12:14 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಬಾವಲಿಗಳ ಸಂತಾನಾಭಿವೃದ್ಧಿ: ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡ ಸರಕಾರ

09/05/2022, 16:07

ತಿರುವನಂತಪುರ(reporterkarnataka.com): ಕೇರಳದಲ್ಲಿ ನಿಫಾ ವೈರಸ್ ಹರಡದಂತೆ ರಾಜ್ಯ ಸರ್ಕಾರವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಬಾವಲಿಗಳ ಸಂತಾನಾಭಿವೃದ್ಧಿಯ ಅವಧಿ ಆರಂಭವಾಗಿದ್ದು, ಈ ವೇಳೆ ರೋಗ ಬಾಧಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇದರ ಅಂಗವಾಗಿ ಮೇ 12ರಂದು ಅರಣ್ಯ ಮತ್ತು ಪಶುಸಂಗೋಪನಾ ಇಲಾಖೆಗಳ ಸಹಯೋಗದಲ್ಲಿ ಎಲ್ಲಾ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ನಿಫಾ ವೈರಸ್, ಬಾವಲಿಗಳ ಜೊಲ್ಲಿನಿಂದ ಸಂತಾನೋತ್ಪತ್ತಿ ಅವಧಿಯಲ್ಲಿ ಹರಡುತ್ತದೆ. ಹಿಂದಿನ ವರ್ಷ ಈ ಸಮಯಕ್ಕೆ ಕೇರಳದಲ್ಲಿ ಏಕಾಏಕಿ ನಿಫಾ ವೈರಸ್ ಸೋಂಕು ವರದಿಯಾಗಿತ್ತು. ಆದ್ದರಿಂದ ಈ ಬಾರಿ ಅಂತಹ ಆರೋಗ್ಯ ಸಮಸ್ಯೆ ಮರುಕಳಿಸದಂತೆ ಜನರು ಎಚ್ಚರಿಕೆ ವಹಿಸಬೇಕು. ಇದಕ್ಕಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕೆಂದು ಅರೋಗ್ಯ ಇಲಾಖೆಯು ಜನರಿಗೆ ತಿಳಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಛಾಯಾಚಿತ್ರ ಪ್ರದರ್ಶನವನ್ನೂ ಆಯೋಜಿಸಲು ನಿರ್ಧರಿಸಲಾಗಿದೆ.

ನಿಫಾ ರೋಗ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ಬರುವವರ ಮೇಲೆ ಗರಿಷ್ಠ ನಿಗಾ ವಹಿಸಿ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿರುವುದಾಗಿ ಆರೋಗ್ಯ ಇಲಾಖೆಯು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು